ಫಾಸ್ಟ್ ಫುಡ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಫಾಸ್ಟ್ ಫುಡ್ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ ೨೩ರಂದು ಫಾಸ್ಟ್ ಫುಡ್ ತರಬೇತಿಯನ್ನು ನಗರದ ಸಂತೇಮರಹಳ್ಳಿ ರಸ್ತೆಯ ಮಾದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಪ್ರಾರಂಭಿಸಲಾಗುತ್ತದೆ.

ಆಸಕ್ತಿಯುಳ್ಳ ಗ್ರಾಮೀಣ ಅಭ್ಯರ್ಥಿಗಳು ಕೂಡಲೇ ನಗರದ ಬಿ. ರಾಚಯ್ಯ ಜೋಡಿ ರಸ್ತೆಯ ಲೀಡ್ ಬ್ಯಾಂಕ್ ಕಟ್ಟqದಲ್ಲಿರುವ ಎಸ್.ಬಿ.ಐ ಗ್ರಾಮೀಣ ತರಬೇತಿ ಸಂಸ್ಥೆಯ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. ೦೮೨೨೬-೨೦೦೨೧೪, ಮೊ.ಸಂ. ೯೬೦೬೦೯೮೮೭೮ ಸಂಪರ್ಕಿಸುವಂತೆ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *