ಫೆ. 21ರಂದು ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆಬ್ರವರಿ 21ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಖೋ-ಖೋ, ಕಬ್ಬಡ್ಡಿ, ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಕ್ರೀಡೆಗಳಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಫೆಬ್ರವರಿ 21ರಂದು ಬೆಳಿಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಇಲಾಖಾ ವತಿಯಿಂದ ಪ್ರಯಾಣ ಭತ್ಯೆಯನ್ನು ನೀಡಲಾಗುತ್ತದೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಬೇರೆ ತಾಲ್ಲೂಕಿನ ಕ್ರೀಡಾಪಟುಗಳ ತಂಡಗಳಿಗೆ ಸೇರಲು ಮತ್ತು ಸೇರಿಸಿಕೊಳ್ಳಲು ಅವಕಾಶವಿರುವುದಿಲ್ಲ. ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು. ತಾಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಇಲಾಖೆ ವತಿಯಿಂದ ನೀಡಿರುವ ಗುರುತಿನ ಚೀಟಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ತರಬೇಕು. ಕ್ರೀಡಾಪಟುಗಳು ಸಂಬಂಧಿಸಿದ ಕ್ರೀಡಾ ಸಮವಸ್ತ್ರದೊಂದಿಗೆ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ದೂ.ಸಂ 08226-224932, ಮೊ.ಸಂ 9916466659, 9844160841, 9945615695, 9880211027 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *