ಬಿಳಿಗಿರಿ ರಂಗನ ಬೆಟ್ಟದ ಸೋಮೇಶ್ವರನ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಸೋಮೇಶ್ವರನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ಸೋಮೇಶ್ವರನ ಕರೆಯಲ್ಲಿ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪೊಲೀಸರು ಕೆರೆಯಿಂದ ಶವವನ್ನು ಹೊರ ತೆಗೆಸಿ ಮರಣೋತ್ತರ ಪರೀಕ್ಷೆಗೆ ಯಳಂದೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೆರೆಯ ಬಳಿ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು, ವಿಳಾಸ ಪತ್ತೆಯಾಗಿಲ್ಲ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಯಳಂದೂರು ಠಾಣೆಯನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *