ಬೇಡರಪುರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ ಮಂಥನ ಕಾರ್ಯಾಗಾರ ಆರಂಭ : ಸಿಇಟಿ ಸೀಟು ಹಂಚಿಕೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಚಾಮರಾಜನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ದೇಶನದಂತೆ ವಿದ್ಯಾರ್ಥಿಗಳು ಮತ್ತು ಪೆÇೀಷಕರಲ್ಲಿ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಯ ಕುರಿತು ಜಾಗೃತಿ ಮತ್ತು ಸ್ಪಷ್ಟತೆ ಮೂಡಿಸಲು ಬೇಡರಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಯುಜಿಸಿಇಟಿ 2026 ಮಂಥನ ಕಾರ್ಯಾಗಾರ ಆರಂಭವಾಗಿದೆ. 

ಈ ಮಹತ್ವದ ಕಾರ್ಯಕ್ರಮವು ಮೇ 25ರಿಂದ ಯಶಸ್ವಿಯಾಗಿ ಪ್ರಾರಂಭವಾಗಿದ್ದು, ಮೇ 30ರವರೆಗೂ ನಡೆಯಲಿದೆ. ಕಾರ್ಯಾಗಾರವು ಕೇವಲ ಇಂಜಿನಿಯರಿಂಗ್‍ಗೆ ಮಾತ್ರ ಸೀಮಿತವಾಗಿರದೆ, ಎಲ್ಲಾ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿ ಬಯಸುವ ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ. ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ​ಕೃಷಿ ವಿಜ್ಞಾನ ಆಧಾರಿತ ಕೋರ್ಸ್‍ಗಳು, ನಸಿರ್ಂಗ್ ಮತ್ತು ಇನ್ನುಳಿದ ವೃತ್ತಿಪರ ಕೋರ್ಸ್‍ಗಳಿಗೆ ಕಾರ್ಯಾಗಾರದಲ್ಲಿ ಮಾರ್ಗದರ್ಶನ ಮಾಡಲಾಗುತ್ತದೆ.

ಕೌನ್ಸಲಿಂಗ್ ಪ್ರಕ್ರಿಯೆಯ ತಿಳಿವಳಿಕೆ, ಆನ್‍ಲೈನ್ ಕೌನ್ಸೆಲಿಂಗ್ ಮತ್ತು ಆಪ್ಷನ್ ಎಂಟ್ರಿ ಮಾಡುವ ಹಂತಗಳ ಬಗ್ಗೆ ಪ್ರಾತ್ಯಕ್ಷಿಕೆ ಮುಖಾಂತರ ವಿವರಣೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಿಇಟಿ ರ್ಯಾಂಕಿಂಗ್‍ಗೆ ಅನುಗುಣವಾಗಿ ಸೂಕ್ತವಾದ ಸೀಟನ್ನು ಪರಿಣಾಮಕಾರಿಯಾಗಿ ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕಾದ ನಿಗದಿತ ಶುಲ್ಕಗಳು ಮತ್ತು ಲಭ್ಯವಿರುವ ರಿಯಾಯಿತಿಗಳ ನಿಖರ ಮಾಹಿತಿಯನ್ನು ಒದಗಿಸಲಾಗುತ್ತಿದೆ. 
​
ಬೇಡರಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2007 ರಲ್ಲಿ ಸಿವಿಲ್, ಕಂಪ್ಯೂಟರ್ ಸೈನ್ಸ್, ಇ ಅಂಡ್ ಸಿ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳೊಂದಿಗೆ ಅತ್ಯಂತ ಯಶಸ್ವಿಯಾಗಿ ಕಾರ್ಯಾರಂಭ ಮಾಡಿತು. ಅತ್ಯಾಧುನಿಕ ಹಾಗೂ ಸುಸಜ್ಜಿತ ಪ್ರಯೋಗಾಲಯಗಳು, ವಿದ್ಯಾರ್ಥಿನಿಲಯಗಳು ಹಾಗೂ ಅತ್ಯುತ್ತಮ ಉದ್ಯೋಗ ಮಾಹಿತಿ ಕೋಶವನ್ನು (ಪ್ಲೇಸ್‍ಮೆಂಟ್ ಸೆಲ್) ಹೊಂದಿದೆ. ಇದುವರೆಗೆ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಸ್ಥೆಯಿಂದ ಯಶಸ್ವಿಯಾಗಿ ಪದವಿ ಪೂರೈಸಿ, ದೇಶ-ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
​
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಬದುಕನ್ನು ರೂಪಿಸಿಕೊಳ್ಳುವಲ್ಲಿ ಸೀಟು ಹಂಚಿಕೆಯ ಪ್ರಕ್ರಿಯೆಯು ಅತ್ಯಂತ ಪ್ರಮುಖ ಹಂತವಾಗಿದೆ. ಗೊಂದಲಗಳಿಲ್ಲದೆ ಸೂಕ್ತ ನಿರ್ಧಾರ ಕೈಗೊಳ್ಳಲು, ಪ್ರಸ್ತುತ ಚಾಲ್ತಿಯಲ್ಲಿರುವ ಈ ಮಂಥನ ಕಾರ್ಯಕ್ರಮದ ಪೂರ್ಣ ಸದುಪಯೋಗವನ್ನು ವಿದ್ಯಾರ್ಥಿಗಳು ಮತ್ತು ಪೆÇೀಷಕರು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಬೇಡರಪುರ, ಚಾಮರಾಜನಗರ ಮೊ.ಸಂ 919448951352 ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಧು ಡಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *