ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023ನೇ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ ಐದು ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ ಐದು ವರ್ಷಗಳ ಕಾಲ ಅತ್ಯುತ್ಯಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ 1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುವುದು.
ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಗೀತಾಲಕ್ಷ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
