ಮುಖ್ಯಮಂತ್ರಿಗಳಿ0ದ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ

 ಮೈಸೂರು:ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು.

ಲಿಂಗಾoಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012 ರಲ್ಲಿ ಆರಂಭಗೊ0ಡು 2023ರಲ್ಲಿ ಪೂರ್ಣಗೊಂಡಿತು. ತೋಟದ ಒಟ್ಟಾರೆ ಅಭಿವೃದ್ಧಿ ಮತ್ತು ನಿರ್ವಹಣೆ ವೆಚ್ಚ 5.60 ಕೋಟಿಗಳಾಗಿದ್ದು, ಒಟ್ಟು 290 ಸಸ್ಯ ಪ್ರಭೇದಗಳನ್ನು ಇಲ್ಲಿ ಕಾಣಬಹುದು. ಇಂದು ಲಾಲ್ ಬಾಗ್ ಅನ್ನು ಒಳಗೊಂಡ0ತೆ ತೋಟಗಾರಿಕೆ ಇಲಾಖೆಯು ಅಭಿವೃದ್ಧಿಪಡಿಸಿರುವ ಕರ್ನಾಟಕದ ನಾಲ್ಕನೇ ಸಸ್ಯ ಶಾಸ್ತ್ರೀಯ ತೋಟವಾಗಿದೆ. ಮೈಸೂರು ನಗರ ಮತ್ತು ಜಿಲ್ಲೆಯ ಪ್ರಪ್ರಥಮ ಸಸ್ಯ ಶಾಸ್ತ್ರೀಯ ತೋಟವೆಂಬ ಹೆಗ್ಗಳಿಕೆಯನ್ನು ಲಿಂಗಾoಬುದಿ ಸಸ್ಯ ಶಾಸ್ತ್ರಿಯ ತೋಟ ಪಡೆದುಕೊಂಡಿದೆ.

ದೇಶ ವಿದೇಶದ ಸಸ್ಯ ಪ್ರಭೇದಗಳ ಪರಿಚಯ ಸ್ಥಳೀಯ ವಾತಾವರಣಕ್ಕೆ ಒಗ್ಗಿಸುವಿಕೆ, ಸಂರಕ್ಷಣೆ, ಸಸ್ಯಾಭಿವೃದ್ಧಿ ಮತ್ತು ಪ್ರಸರಣ ಕೈಗೊಳ್ಳುವುದು. ಸ್ಥಳೀಯ ಸಸ್ಯ ಪ್ರಭೇದಗಳು, ಅಪರೂಪದ ಅಳಿವಿನಂಚಿನಲ್ಲಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಸಸ್ಯ ಪ್ರಭೇದಗಳ ಪರಿಚಯ, ಸಂರಕ್ಷಣೆ ಮತ್ತು ಸಸ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡುವುದು. ಸಸ್ಯ ಸಂರಕ್ಷಣೆಯ ಜೊತೆ ಜೊತೆಗೆ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ವಿಶೇಷ ಒತ್ತು ನೀಡುವುದು. ವಿವಿಧ ಸಸ್ಯ ಪ್ರಭೇದಗಳ ನಿಖರ ಗುರುತಿಸುವಿಕೆ ಮತ್ತು ದಾಖಲಾತಿಗಾಗಿ ಹರ್ಬೇರಿಯಂ ಸ್ಥಾಪಿಸುವುದು. ಸಸ್ಯ ಪ್ರಭೇದಗಳ ಸಮಗ್ರ ಮಾಹಿತಿಯನ್ನು ದಾಖಲಿಸುವ ವೈಜ್ಞಾನಿಕ ಸಸ್ಯ ಕೇಂದ್ರವನ್ನಾಗಿಸುವುದು. ಸಸ್ಯ ಪ್ರಭೇದಗಳ ಬಗ್ಗೆ ಅಭ್ಯಸಿಸಲು ವಿದ್ಯಾರ್ಥಿಗಳು, ಪರಿಸರ ಪ್ರಿಯರು, ಸಸ್ಯ ಶಾಸ್ತ್ರೀಯ ಆಸಕ್ತರು, ಸಸ್ಯ ವರ್ಗೀಕರಣ ಆಸಕ್ತರಿಗೆ ವೈಜ್ಞಾನಿಕ ವೇದಿಕೆಯನ್ನು ಕಲ್ಪಿಸುವುದು ಈ ಸಸ್ಯ ಶಾಸ್ತ್ರೀಯ ತೋಟದ ಮೂಲ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್, ವಿಧಾನಸಭಾ ಶಾಸಕರಾದ ಜಿ .ಟಿ ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *