ಚಾಮರಾಜನಗರ: 2023-24ನೇ ಸಾಲಿನಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಡಿಬಿಟಿ ಆಧಾರಿತ ರಾಜ್ಯ ಮಟ್ಟದ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಯ ಎಸ್.ಎ.ಟಿ.ಎ-ಐಡಿ, ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ್ ಕಾರ್ಡ್, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ವಿದ್ಯಾರ್ಥಿಯ ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆಗೆ ಸೀಡಿಂಗ್ (ಎನ್.ಪಿ.ಸಿ.ಐ) ಆಗಿರಬೇಕು. ವಿದ್ಯಾರ್ಥಿಯು ವೆಬ್ ಸೈಟ್ https://ssp.karnataka.gov.in/ssp2324/homenew.aspx ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.