ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಉಪನ್ಯಾಸಕ ಮಹಾಂತೇಶ್ ಕುರುಬರ, ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಎನ್.ವಿ.ಶ್ವೇತಾದ್ರಿ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಸನ್ಮಾನಿಸಿದ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥಪ್ರಸನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ ೨೭ ರಿಂದ ೨೯ರವರಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವೆಂಕಟಯ್ಯನಛತ್ರ ಕಾಲೇಜಿನ ಉಪನ್ಯಾಸಕ ಮಹಾಂತೇಶ್ ಕುರುಬರ ವೈಟ್ಲಿಪ್ಟಿಂಗ್ ಪ್ರಥಮ ಸ್ಥಾನ ಹಾಗೂ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಎನ್.ವಿ.ಶ್ವೇತಾದ್ರಿ ೭೦ ಕೆಜಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಇದು ಇಲಾಖೆಗೆ ಸಂದ ದೊಡ್ಡಗೌರವ ಇದಾಗಿದ್ದು, ಅವರನ್ನು ಇಲಾಖೆ ವತಿಯಿಂದ ಹೃತ್ಪೂರ್ವಕವಾಗಿ ಅಭಿನಂದಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಹೇಶ್ಹರವೆ, ನಾಗೇಶ್, ಸಿ.ಲಿಂಗಯ್ಯ, ತಿಮ್ಮರಾಜು ಹಾಜರಿದ್ದರು.