ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗೆ ಕ್ರೀಡೆ ಸಹಕಾರಿ : ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಚಾಮರಾಜನಗರ ತಾಲೂಕು ಮಟ್ಟದ ಶಾಲಾ ಶಿಕ್ಷಣ (ಪದವಿ ಪೂರ್ವ)ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇನ್ನು ಐದು ವರ್ಷಗಳು ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸುವಾಗ ಕ್ರೀಡೆಯಲ್ಲಿ ಸಾಧನೆ ಮಾಡಿದ್ದರೆ ನಿಮಗೆ ಅವಕಾಶ ದೊರೆಯತ್ತದೆ. ವೃತ್ತಿಪರ ಶಿಕ್ಷಣ ಪಡೆಲು ಸಹ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದರೆ ಅಂಥವರಿಗೆ ಕೋರ್ಸುಗಳ ಹಂಚಿಕೆಯಲ್ಲಿ ಕ್ರೀಡಾ ಕೋಟಾದಲ್ಲಿ ಸೀಟು ಲಭಿಸುತ್ತದ. ಇದನ್ನು ಮನಕಟ್ಟು ತಾವೆಲ್ಲರು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಕ್ರೀಡಾಕೂಟವನ್ನು ಉದ್ಗಾಟಿಸಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಶಿಕ್ಷಣ ಪೊರೈಸಿ ಪಿಯುಸಿ ಶಿಕ್ಷಣ ಪಡೆಯುವ ತಾವೆಲ್ಲರು ಕಾಲೇಜು ಶಿಕ್ಷಣ ಪಡೆಯುವ ಜೊತೆಗೆ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ತೆಗೆದುಕೊಳ್ಳುವುದು ಮುಖ್ಯ. ಅದರೊಟ್ಟಿಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ತಮ್ಮ ಸುಪ್ತ ಪ್ರತಿಭೆಯನ್ನು ಪ್ರದರ್ಶನ ಮಾಡಿ, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ತಮ್ಮದಾಗಿಸಿಕೊಂಡರೆ ಮುಂದಿನ ತಮ್ಮ ಭವಿಷ್ಯ ಉಜ್ವಲವಾಗಿರುತ್ತದೆ. ಈ ನಿಟ್ಟಿನಲ್ಲಿ ಪರಿಶ್ರಮ ಪಟ್ಟು ತಮಗೆ ಇಷ್ಟವಾದ ಕ್ರೀಡೆಗಳಲ್ಲಿ ಭಾಗವಹಿಸಿ,ಗೆಲುವು ಸಾಧಿಸಬೇಕು. ಸ್ಪರ್ಧೆ ಮಾಡುವುದು ಮುಖ್ಯ. ಸೋಲು ಗೆಲುವು ನಂತರದಾಗಿರುತ್ತದೆ. ಹೀಗಾಗಿ ಎಲ್ಲರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಸೌಹಾರ್ದತವಾಗಿ ಕ್ರೀಡಾ ಮನೋಭಾವದಿಂದ ವರ್ತನೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂತೇಮರಹಳ್ಳಿ ಕಾಲೇಜಿನ ಪ್ರಾಂಶುಪಾಲ ಸಪಿ. ಪ್ರಿಯಾಶಂಕರ್, ಚಂದಕವಾಡಿ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ಸ್ವಾಮಿ, ಹರವೆ ಕಾಲೇಜಿನ ಪ್ರಾಂಶುಪಾಲ ಮಹೇಶ್ ಹರವೆ, ಮರಿಯಾಲ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮೋಹನ್ ಕುಮಾರ್, ಉಪನ್ಯಾಸಕರಾದ ಮಹದೇವಪ್ರಭು, ದೈಹಿಕ ಶಿಕ್ಷಣ ಶಿಕ್ಷಕರಾದ ಚಿಕ್ಕಬಸವಯ್ಯ, ಜೋಸೆಫ್ ಮೊದಲಾಧವರು ಇದ್ದರು. ತಾಲೂಕು ವ್ಯಾಪ್ತಿಯ ಪಿಯು ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *