ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು 2023ನೇ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿ ನೀಡುವ ಸಲುವಾಗಿ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಮಕ್ಕಳು 5 ರಿಂದ 18 ವರ್ಷದ ವಯೋಮಾನದಲ್ಲಿರಬೇಕು. ವಯಸ್ಸಿನ ಬಗ್ಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿರಬೇಕು. ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಶಸ್ತಿಯು ಪ್ರತಿ ಮಗುವಿಗೆ 10 ಸಾವಿರ ರೂ.ಗಳಂತೆ ನಗದು ಬಹುಮಾನ ಒಳಗೊಂಡಿರುತ್ತದೆ.

ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಇಲಾಖೆ ಉಪ ನಿರ್ದೇಶಕರಾದ ಗೀತಾಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *