ಶ್ರೀಕಾಗಿನೆಲೆ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಮೈಸೂರು: ಮೈಸೂರಿನ ಶ್ರೀ ಕಾಗಿನೆಲೆ ಬಿ.ಎಡ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ದೊಡ್ಡ ಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಟ್ಟಿ ಹುಂಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ರುಕ್ಮಾಂಗದ, ಕಾರ್ಯದರ್ಶಿ ಎಸ್.ಸೌಮ್ಯ, ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಕೆ.ವಿಶಾಲಾಕ್ಷಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಎಸ್.ಎಂ.ಶರತ್‌ಕುಮಾರ್, ಶ್ರೀ ಸಣ್ಣ ರಾಮೇಗೌಡ, ಶ್ರೀ ನಾಗೇಶ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *