ಚಾಮರಾಜನಗರ: ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸಲಹೆ ನೀಡಿದರು.
ನಗರದ ರೋಟರಿ ಭವನದಲ್ಲಿ ಭಾನುವಾರ ನೆಹರು ಯುವ ಕೇಂದ್ರ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ, ರೋಟರಿ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಜನಪರ ಯೋಜನೆಗಳ ಅನು?ನಕ್ಕೆ ಮುಂದಾಗಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ವಿದ್ಯಾರ್ಥಿನಿಯರಿಗೆ, ಕೂಲಿ ಮಹಿಳಾ ಕಾರ್ಮಿಕರಿಗೆ ತುಂಬಾ ಅನುಕೂಲವಾಗಿದೆ ಎಂದರು.
ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಉತ್ತಮ ಭವಿ?ಕ್ಕೆ ನೆರವಾಗಬೇಕು ಎಂದರು.
ಉಪನ್ಯಾಸರಾದ ಕೆ.ಎಸ್.ಮಹೇಶ್ ಮಾತನಾಡಿ, ಗಡಿ ಜಿಲ್ಲೆಯ ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ಸಂತೋ?ದ ವಿ?ಯ ಎಂದು ಕಾರ್ಯಕ್ರಮ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷರಾದ ಎಂ. ರಾಮ ಚಂದ್ರ ಅವರು ವಿದ್ಯೆ ಯಾರು ಸಹ ಅಪಹರಿಸಲಾಗದ ಅತ್ಯಮೂಲ್ಯ ಆಸ್ತಿ. ವಿದ್ಯಾರ್ಥಿಗಳು ಕ?ಪಟ್ಟು ವಿದ್ಯಾಭ್ಯಾಸ ಮಾಡಿದರೆ ಉನ್ನತ ಮಟ್ಟದ ಸ್ಥಾನ ಪಡೆಯಬಹುದು ಎಂದು ತಿಳಿಸಿದರು.
ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಶೃಂಗಾರ್ ಹೋಟೆಲ್ ಮಾಲಿಕರಾದ ಎಂ .ನಂದಪ್ಪ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ .ಎಸ್. ಮಂಜುನಾಥ್. ವಾಲ್ಮೀಕಿ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಕೆ. ನಾಗರಾಜು, ರೋಟರಿ. ಜಿ ಅಂಕ ಶೆಟ್ಟಿ. ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆಯ ಗೌರವ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷರಾದ ಜಿ ಬಂಗಾರು. ಸಂಸ್ಥೆಯ ನಿರ್ದೇಶಕರಾದ ಮೇಘಶ್ರೀ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
