ಚಾಮರಾಜನಗರ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 29ರಂದು ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಬಹುದೆಂದು ಮನಗಂಡು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.