ಹನಿ ನೀರಾವರಿ ಅಳವಡಿಕೆಗೆ ಸಹಾಯಧನ

ಚಾಮರಾಜನಗರ: ತೋಟಗಾರಿಕೆ ಇಲಾಖೆಯು ೨೦೨೩-೨೪ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ದತಿ (ಡ್ರಿಪ್ ಇರಿಗೇಷನ್) ಅಳವಡಿಸಿದ ರೈತರಿಗೆ ಸಹಾಯಧನ ನೀಡಲಿದೆ.

ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಪದ್ದತಿ (ಡ್ರೀಪ್ ಇರಿಗೇಷನ್) ಅಳವಡಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡ ರೈತರಿಗೆ ಶೇ ೯೦ರಷ್ಟು ಸಹಾಯಧನ, ಇತರೆ ವರ್ಗದ ರೈತರಿಗೆ ಶೇ.೭೫ರ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಉತ್ಪಾದಕರ ಸಂಸ್ಥೆ, ಕಂಪನಿ ಅನುಮೋದನೆಗೊಂಡಿದ್ದು, ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ತಾಲೂಕಿನ ತೋಟಗಾರಿಕೆ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *