- ಧೃಡ ಕರ್ನಾಟಕದ ಸಂಕಲ್ಪ-ಸರ್ಕಾರಕ್ಕೆ 100 ದಿನಗಳ ಸಂಭ್ರಮ
ಚಾಮರಾಜನಗರ: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ 100 ದಿನಗಳ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಐತಿಹಾಸಿಕ ಪಾರಂಪಾರಿಕ ಪ್ರವಾಸಿತಣಗಳಲ್ಲಿ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಜಿಲ್ಲೆಯ ಪ್ರಸಿದ್ದ ಹನೂರು ತಾಲೂಕಿನ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೇವಾಲಯ, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ, ಕೊಳ್ಳೇಗಾಲ ತಾಲೂಕಿನ ಮಧ್ಯರಂಗ ದೇವಾಲಯ, ಸೋಮೇಶ್ವರ ದೇವಾಲಯ, ಶಿಂಷಾ ಮಾರಮ್ಮ ದೇವಾಲಯ, ಚಾಮರಾಜನಗರ ಪಟ್ಟಣದ ಶ್ರೀಚಾಮರಾಜೇಶ್ವರ ದೇವಾಲಯ ಸೇರಿದಂತೆ ಇತರೆಡೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿದ್ದು, ಈ ಅವಧಿಯಲ್ಲಿ ಅನೇಕ ಮಹತ್ತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ.
Related