118 ನೇ ದಿನವೂ ಮುಂದುವರೆದ ಕಾವೇರಿ ಹೋರಾಟ

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 118 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ  ರಾಷ್ಟ್ರೀಯ ಹೆದ್ದಾರಿಯಲ್ಲಿ   ಪ್ರತಿಭಟನೆ ನಡೆಲಾಯಿತು. 

ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ  ಕರ್ನಾಟಕ ಸೇನಾಪಡೆ ಅಧ್ಯಕ್ಷ .ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ  ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ  ಶ್ರೀನಿವಾಸಗೌಡ ಮಾತನಾಡಿ,    ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 118 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ  ರಾಷ್ಟ್ರೀಯ ಹೆದ್ದಾರಿಯಲ್ಲಿ  ಪ್ರತಿಭಟನೆ ನಡೆಸಲಾಗಿದೆ ಎಂದರು.

ಮಳೆ ಅಭಾವದಿಂದ ರಾಜ್ಯದಲ್ಲಿ ಜಲಾಶಯಗಳು ಬರಿದಾಗುತ್ತಿದ್ದು, ಎಲ್ಲತರದ  ಬೆಳೆಗಳು ಸಂಪೂರ್ಣ ಒಣಗುತ್ತಿವೆ. ರಾಜ್ಯದಲ್ಲಿ ನೀರಿನ ಅಭಾವ ಇದ್ದು, ಮುಂದಿನ ದಿನಗಳಲ್ಲಿ ತೀವ್ರ ಬರಗಾಲ ಬರಲಿದೆ.ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಗೊಂಡು  ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು. ಕೇಂದ್ರ ಮಧ್ಯಪ್ರವೇಶಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಿ ರಾಜ್ಯದ ಜನತೆಗೆ ನೀರು ಉಳಿಸಬೇಕು .ಇಲ್ಲದಿದ್ದರೆ ಉಗ್ರ ಹೋರಾಟ  ನಡೆಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ  ಗು.ಪುರುಷೋತ್ತಮ್, ರವಿಚಂದ್ರಪ್ರಸಾದ್ ಕಹಳೆ, ತಾಂಡವಮೂರ್ತಿ, ರಾಚಪ್ಪ, ಮಂಜು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *