ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ಚಾಮರಾಜನಗರ: ಪ್ರಸಕ್ತ 2025ನೇ ಸಾಲಿನ ಕೊನೆಯ ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥಗೊಂಡಿದ್ದು, ವಾರ್ಷಿಕವಾಗಿ 4 ಲಕ್ಷಕ್ಕೂ ಹೆಚ್ಚಿನ ಪ್ರಕರಣಗಳನ್ನು ಪರಿಹರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ವಾಜ್ಯಪೂರ್ವ ಪರಿಹಾರ (ಎ.ಡಿ.ಆರ್) ಕೇಂದ್ರದಲ್ಲಿಂದು ಈ ವಿಷಯ ತಿಳಿಸಿದ ಅವರು ಕಳೆದ ಬಾರಿಯ ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು. ಇತ್ತೀಚೆಗೆ ನಡೆದ (ಡಿ.13) ಅದಾಲತ್‍ನಲ್ಲಿ 2642 ನ್ಯಾಯಾಲಯ ಪ್ರಕರಣಗಳು ಹಾಗೂ 1,17,403 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 1,20,045 ಪ್ರಕರಣಗಳು ಇತ್ಯರ್ಥವಾಗಿವೆ ಎಂದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ‘ಸರ್ವರಿಗೂ ನ್ಯಾಯ’ ಪರಿಕಲ್ಪನೆಯಡಿ ಜನಸಾಮಾನ್ಯರ ಅನುಕೂಲಕ್ಕಾಗಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಜಿಲ್ಲೆಯ ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಎಲ್ಲಾ ರೀತಿಯ ಸಿವಿಲ್, ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು, ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲು ಡಿ. 13ರಂದು ಅದಾಲತ್ ಏರ್ಪಡಿಸಲಾಗಿತ್ತು ಎಂದು ತಿಳಿಸಿದರು.

ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಚಾಮರಾಜನಗರದ 665, ಯಳಂದೂರು 230, ಕೊಳ್ಳೇಗಾಲ 1089 ಹಾಗೂ ಗುಂಡ್ಲುಪೇಟೆಯ 658 ಸೇರಿದಂತೆ ಒಟ್ಟು 2642 ನ್ಯಾಯಾಲಯದ ಪ್ರಕರಣಗಳು ಮತ್ತು ಚಾಮರಾಜನಗರದ 89503, ಯಳಂದೂರಿನ 3261, ಕೊಳ್ಳೆಗಾಲ 7843 ಹಾಗೂ ಗುಂಡ್ಲುಪೇಟೆಯ 16796 ಸೇರಿದಂತೆ ಒಟ್ಟು 1,17,403 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದ ಒಟ್ಟು 1,20,045 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಚೆಕ್ಕು ಅಮಾನ್ಯ ಪ್ರಕರಣಗಳು, ಎಂ.ಇ.ಸಿ ಹಾಗೂ ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ಒಟ್ಟು 15,81,11,395 ರೂ. ಗಳನ್ನು ಸಂಗ್ರಹಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

ರಾಜಿ ಯೋಗ್ಯ ಪ್ರಕರಣಗಳ ಇತ್ಯರ್ಥಕ್ಕಾಗಿ ಜನಸಾಮಾನ್ಯರು ಲೋಕ್ ಅದಾಲತ್‍ಗಾಗಿ ಕಾಯುವ ಅವಶ್ಯವಿಲ್ಲ. ಇದಕ್ಕಾಗಿ ನ್ಯಾಯಾಲಯದಲ್ಲಿ ‘ಮಧ್ಯಸ್ಥಿಕೆ ಶಿಬಿರ’ (ಮೀಡಿಯೇಶನ್ ಕ್ಯಾಂಪ್) (ಒeಜiಚಿಣioಟಿ ಅಚಿmಠಿ) ಏರ್ಪಡಿಸಲಾಗಿದ್ದು, ಮಧ್ಯಸ್ಥಿಕೆ ಶಿಬಿರವು ಉಭಯ ಪಕ್ಷಕಾರರಿಗೂ ನ್ಯಾಯ ದೊರಕಿಸಲು ಶ್ರಮಿಸುತ್ತಿದೆ. ಕೌಟುಂಬಿಕವಾಗಿ ವಿವಾಹ ವಿಚ್ಛೇದÀನ, ಪತಿ ಅಥವಾ ಪತ್ನಿ ಕಲಹ, ಜೀವನಾಂಶ ಕೋರಿಕೆ ಹಾಗೂ ವಿಚ್ಚೇಧನಾ ಪ್ರಕರಣ ದಾಖಲಾಗುವ ಮೊದಲಿನ ದೂರುಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 11 ಪ್ರಕರಣಗಳನ್ನು ಇತ್ಯರ್ಥಪಡಿಸಿ ಪತಿ-ಪತ್ನಿಯರನ್ನು ಒಂದುಗೂಡಿಸಿರುವುದು ಈ ಅದಾಲತ್ ವಿಶೇಷವಾಗಿದೆ ಎಂದÀರು. 

ನ್ಯಾಯಾಲಯದ ಬಾಕಿ ರಾಜಿಯೋಗ್ಯ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳ ಕಕ್ಷಿದಾರರು ನ್ಯಾಯಾಧೀಶರು, ವಕೀಲರು, ಸಂಧಾನಕಾರರಿಂದ ಲೋಕ್ ಅದಾಲತ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ 10-15 ವರ್ಷಗಳಿಂದ ಬಾಕಿ ಇದ್ದ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗುವ ಮೊದಲೆ ಸಾಕಷ್ಟು ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿರುವುದು ಹರ್ಷದಾಯವಾಗಿದೆ. ಇದರಿಂದ ಕಕ್ಷಿದಾರರ ಸಮಯ, ಹಣ, ಉಳಿತಾಯವಾಗಿದೆ. ನ್ಯಾಯಾಲಯದ ಹೊರೆಯೂ ತಗ್ಗಿದೆ. ಅದಾಲತ್ ಯಶಸ್ಸಿಗೆ ಜಿಲ್ಲಾಡಳಿತ, ವಿವಿಧ ಇಲಾಖೆಗಳು, ಬ್ಯಾಂಕ್‍ಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್ ಅನ್ನು ವರ್ಷದಲ್ಲಿ 4 ಬಾರಿ ಹಮ್ಮಿಕೊಳ್ಳಲಾಗುತ್ತದೆ. 2025ರ ಮಾರ್ಚ್ 8ರಂದು ನಡೆದ ಲೋಕ್ ಅದಾಲತ್‍ನಲ್ಲಿ 74307, ಜುಲೈ 12ರಂದು ನಡೆದ ಅದಾಲತ್‍ನಲ್ಲಿ 101431, ಸೆಪ್ಟೆಂಬರ್ 13ರಂದು ನಡೆದ ಅದಾಲತ್‍ನಲ್ಲಿ 104649 ಮತ್ತು ಡಿಸೆಂಬರ್ 13ರ ಅದಾಲತ್‍ನಲ್ಲಿ 120045 ಸೇರಿದಂತೆ ಒಟ್ಟಾರೆ ಈ ವರ್ಷದಲ್ಲಿ 4,00,432 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ಮಾಹಿತಿ ನೀಡಿದರು.   

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ. ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *