ಮಾ. 6, 7ರಂದು ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ 18ನೇ ಕನ್ನಡ ವಿಜ್ಞಾನ ಸಮ್ಮೇಳನ ಸಮಾರಂಭ

ಚಾಮರಾಜನಗರ, ಮಾರ್ಚ್ 03 (ಕರ್ನಾಟಕ ವಾರ್ತೆ):-  18ನೇ ಕನ್ನಡ ವಿಜ್ಞಾನ ಸಮ್ಮೇಳನವು ಮಾರ್ಚ್ 6 ಮತ್ತು 7 ರಂದು ನಡೆಯಲಿದ್ದು, ಸಮಾರಂಭದ ಉದ್ಘಾಟನೆಯು ಮಾರ್ಚ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಲಾಗಿದೆ. 

      ಕೇರಳದ ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಸಿದ್ದು ಪಿ. ಅಲಗೂರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರಣಪ್ಪ ಬಿ. ಹಲಸೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. 

  ತಿರುವನಂತಪುರ ಐ,ಐ,ಎಸ್,ಟಿ ಕುಲಾಧಿಪತಿಗಳು, ಬೆಂಗಳೂರು ಇಸ್ರೋ ಖ್ಯಾತ ವಿಜ್ಞಾನಿಗಳು ಹಾಗೂ ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾದ ಡಾ. ಬಿ.ಎನ್. ಸುರೇಶ್ ಅವರು ದಿಕ್ಸೂಚಿ ಭಾಷಣ ಮಾಡುವರು. 

  ಹಾವೇರಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಸುರೇಶ್ ಹೆಚ್ ಜಂಗಮಶೆಟ್ಟಿ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಆಶೋಕ ಎಸ್. ಅಲೂರ್, ಬೆಂಗಳೂರು ನಗರ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಬಿ. ರಮೇಶ್ ಅವರು ಗೌರವ ಉಪಸ್ಥಿತಿ ವಹಿಸುವರು.

   ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ, ಭಾರತ ರತ್ನ ಡಾ. ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ, ಭಾರತ ರತ್ನ ಡಾ. ಭೀಮ್ ಸೇನ್ ಜೋಶಿ ಸಾಂಸ್ಕøತಿಕ ವಿಜ್ಞಾನ ಪುರಸ್ಕಾರ ಪ್ರಶಸ್ತಿ ನೀಡಲಾಗುವುದು. 

   ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕರಾದ ಪ್ರೊ. ಮೊರಬದ ಮಲ್ಲಿಕಾರ್ಜುನ, ಕೊಳ್ಳೇಗಾಲದ ಮಾನಸ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಗಳಾದ ಡಾ. ಎಸ್. ದತ್ತೇಶ್ ಕುಮಾರ್, ಮೈಸೂರಿನ ಶಾರದ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಹನುಮಂತಚಾರ್ ಜೋಶಿ ಅವರು ವಿಶೇಷ ಅಹ್ವಾನಿತರಾಗಿ ಪಾಲ್ಗೊಳ್ಳುವರು. 

  ಸಮಾರೋಪ ಸಮಾರಂಭವು ಮಾರ್ಚ್ 7ರಂದು ಮಧ್ಯಾಹ್ನ 2.30 ಗಂಟೆಗೆ ನಡೆಯಲಿದೆ. ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಅಧ್ಯಕ್ಷತೆ ವಹಿಸುವರು. ಬೆಂಗಳೂರು ಎಸ್- ವ್ಯಾಸ ವಿಶ್ವವಿದ್ಯಾಲಯದ ಪ್ರೊ.-ಕುಲಪತಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ. ಪ್ರಹ್ಲಾದ ರಾಮರಾವ್, ಅಮೇರಿಕಾ ಎಂ.ಜಿ.ಐ ಸೈಬರ್ ಸೆಕ್ಯೂರಿಟಿ ಮತ್ತು ಎಐ ನಿರ್ದೇಶಕರಾದ ಡಾ. ಉದಯ ಶಂಕರ್ ಪುರಾಣಿಕ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

   ಹಾವೇರಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಸುರೇಶ್ ಹೆಚ್ ಜಂಗಮಶೆಟ್ಟಿ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಆಶೋಕ ಎಸ್. ಅಲೂರ್, ಸರ್ ಸಿ.ವಿ ರಾಮನ್ ಪ್ರಶಸ್ತಿ ಪುರಸ್ಕøತರು ಹಾಗೂ ಸ್ವದೇಶಿ ವಿಜ್ಞಾನ ಆಂದೋಳನ-ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾ. ಎಂ.ಎಸ್. ಜೋಗದ್ ಅವರು ಗೌರವ ಉಪಸ್ಥಿತಿ ವಹಿಸುವರು. 

  ಚಾಮರಾಜನಗರ ವಿಶ್ವವಿದ್ಯಾಲಯದ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ಕೆ.ಎಂ. ಮಹದೇವನ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಎಸ್.ಕೆ. ನವೀನ್ ಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *