23 ಮತ್ತು 24 ಕ್ಕೆ ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ಮಹಾಅಧಿವೇಶನ

  • ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಾಜಿ ಸಚಿವೆ ಗೀತಾಮಹದೇವಪ್ರಸಾದ್ ಮನವಿ
  • ವೀರಶೈವ-ಲಿಂಗಾಯತ ಸಮುದಾಯಗಳ ಶಕ್ತಿ ಪ್ರದರ್ಶನ: ಓಬಿಸಿ ಪಟ್ಟಿಗೆ ಸೇರ್ಪಡೆಗೆ ಒತ್ತಾಯ

ಚಾಮರಾಜನಗರ: ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ಮಹಾಅಧಿವೇಶನವು ಡಿ. 23 ಮತ್ತು 24 ರಂದು ಎರಡು ದಿನಗಳ ನಡೆಯಲಿದ್ದು, ಈ ಅಧಿವೇಶನÀಕ್ಕೆ ಜಿಲ್ಲೆಯಿಂದ ವೀರಶೈವ-ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಮಾಜಿ ಸಚಿವೆ ಡಾ. ಗೀತಾ ಮಹದೇವಪ್ರಸಾದ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1904 ರಲ್ಲಿ ಪೂಜ್ಯ ಹಾನಗಲ್ ಕುಮಾರಸ್ವಾಮಿ ಅವರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಸ್ಥಾಪನೆಗೊಂಡಿದ್ದು, ಕಳೆದ 119 ವರ್ಷದಿಂದಲೂ ವೀರಶೈವ- ಲಿಂಗಾಯತ ಸಂಘಟನೆ ಮತ್ತು ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದೆ. ಮಹಾಸಭೆಗೆ 1.75 ಲಕ್ಷಕ್ಕು ಹೆಚ್ಚು ಸದಸ್ಯರು ಇದ್ದು, ಬೆಂಗಳೂರಿನಲ್ಲಿ ತನ್ನದೇ ವೀರಶೈವ-ಲಿಂಗಾಯತ ಭವನವನ್ನು ಹೊಂದಿದೆ.

ಸಮಾಜ ಸಂಘಟನೆಗೆ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಇಂದಿನ ವೀರಶೈವ ಲಿಂಗಾಯತರನ್ನು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂಘಟನೆ ಉದ್ದೇಶದಿಂದ ಇಲ್ಲಿಯವರೆಗೆ 23 ಮಹಾ ಅಧಿವೇಶವನ್ನು ಸಂಘಟನೆ ಮಾಡಲಾಗಿದೆ. ಈಗ 2023ರ ಡಿ. 23 ಮತ್ತು 24 ರಂದು ದಾವಣಗೆರೆ ನಗರದಲ್ಲಿ 24ನೇ ಮಹಾಅಧಿವೇಶವನ್ನು ಏರ್ಪಡಿಸಲಾಗಿದೆ. ಈ ಎರಡು ದಿನಗಳ ಕಾಲ ಅಧಿವೇಶನಕ್ಕೆ ನಾಡಿನ ವಿವಿಧ ಮಠಾದೀಶರುಗಳು, ಸಾಹಿತಿಗಳು, ಕಲಾವಿದರು, ಮುಖಂಡರು, ಮಹಿಳಾ ಪ್ರತಿನಿಧಿಗಳು 31 ಜಿಲ್ಲೆಗಳ ಶರಣ- ಶರಣಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈ ಅಧಿವೇಶನದಲ್ಲಿ 10 ಲಕ್ಷಕ್ಕು ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಐದು ತಾಲೂಕುಗಳಿಂದ ಬಸ್ ಹಾಗೂ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರಳಲಿದ್ದಾರೆ. ಮಹಿಳೆಯರಿಗಾಗಿ ಒಂದು ಪ್ರತ್ಯೇಕ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಹಿಳಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದರು.

ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನದಲ್ಲಿ ಪ್ರಮುಖವಾಗಿ ಸಮುದಾಯ ಅಭಿವೃದ್ದಿ ವಿಚಾರವಾಗಿ ಚರ್ಚೆ ನಡೆಯಲಿದ್ದು, ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುವುದು. ಕಾಂತರಾಜು ಆಯೋಗ ವೈಜ್ಞಾನಿಕವಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಒತ್ತಾಯಿಸುವುದು ಸೇರಿದಂತೆ ಅನೇಕ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದರು

ಗೋಷ್ಠಿಯಲ್ಲಿ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನಾಗೇಂದ್ರ, ತಾಲೂಕು ಅಧ್ಯಕ್ಷ ಹೊಸೂರು ನಟೇಶ್, ಜಿಲ್ಲಾ ನಿರ್ದೇಶಕರಾದ ಕಾಡಹಳ್ಳಿ ಮಧು, ಪ್ರಮೋದ್ ಇದ್ದರು.

Leave a Reply

Your email address will not be published. Required fields are marked *