ಅಪಘಾತ ವಲಯ ಅಭಿವೃದ್ಧಿ ಪಡಿಸಲಾಗುತ್ತದೆ: ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆ ಅಭಿವೃದ್ಧಿಗಾಗಿ 3.80 ಕೋಟಿ ರೂ.ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಎಂಎಸ್ಐಎಲ್ ಅಧ್ಯಕ್ಷರು, ಶಾಸಕ ಸಿ.ಪುಟ್ಟರಂಗಶೆಟ್ಟಿ ಇಂದು ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ,ನಗರದ ಬಿ.ರಾಚಯ್ಯ ಜೋಡಿರಸ್ತೆಯ ಭುವನೇಶ್ವರಿ ವೃತ್ತದಿಂದ 1200 ಮೀಟರ್ ಅಪಘಾತ ವಲಯ ರಸ್ತೆ ಅಭಿವೃದ್ಧಿ, ರಸ್ತೆ ಸುರಕ್ಷತಾ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಾಮನಿರ್ದೇಶನ ಸದಸ್ಯ ಎಂ.ಸ್ವಾಮಿ, ಇಂಜಿನಿಯರ್ ವಿನೋದ್ ಹಾಜರಿದ್ದರು.