ಆಲೂರು ಹೊಮ್ಮದಿಂದ ಕಂದಹಳ್ಳಿ ಮಾರ್ಗದ ರಸ್ತೆ ಅಭಿವೃದ್ದಿಗೆ 5 ಕೋಟಿ : ಎ.ಆರ್. ಕೃಷ್ಣಮೂರ್ತಿ

ಮಲೆನಾಡು ಅಭಿವೃದ್ದಿ ಯೋಜನೆಯಡಿ ಕ್ಷೇತ್ರದ 7 ಗ್ರಾಮಗಳಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ
ಚಾಮರಾಜನಗರ: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆಲೂರು ಹೊಮ್ಮ ದಿಂದ ಕಂದಹಳ್ಳಿ ಮಹದೇಶ್ವರ ದೇವಸ್ಥಾನದ ವರಗಿನ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಅನುದಾನದಡಿಯಲ್ಲಿ 5 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಸದ್ಯದಲ್ಲಿಯೇ ರಸ್ತೆ ಅಭಿವೃದ್ದಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮುರ್ತಿ ತಿಳಿಸಿದರು.
ತಾಲೂಕಿನ ಹೊಮ್ಮ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಬೀದಿಯಲ್ಲಿ ಸಿಮೆಂಟ್ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಾನು ಕ್ಷೇತ್ರದ ಶಾಸಕನಾದ ಬಳಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಕ್ರಮಗಳು ನಡೆಯುತ್ತಿದೆ. ಕ್ಷೇತ್ರದ 7 ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲು ಮಲೆನಾಡು ಅಭಿವೃದ್ದಿ ಯೋಜನೆಯಡಿ ತಲಾ 5 ಲಕ್ಷ ರೂ. ಬಿಡುಗಡೆಯಾಗಿದೆ. ಆದರಂತೆ ಗ್ರಾಮದಲ್ಲಿ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದ್ದೇನೆ. ಗ್ರಾಮಕ್ಕೆ ಸೇರಿರುವ ಬಸವರಾಜಪುರದಲ್ಲಿ ರಸ್ತೆ, ಚರಂಡಿ, ಸಿ.ಸಿ. ರಸ್ತೆ ನಿರ್ಮಾಣಕ್ಕೆ 30 ಲಕ್ಷ ರೂ. ಬಿಡುಗಡೆಯಾಗಿದೆ. ಅಲ್ಲದೇ ಅಲೂರಿನಿಂದ ಹೊಮ್ಮಕ್ಕೆ ಬರುವ ರಸ್ತೆ ಮಾರ್ಗವು ತೀರಾ ಶಿಥಿಲವಾಗಿದ್ದು, ಈ ರಸ್ತೆಯನ್ನು ಅಭಿವೃದ್ದಿಸಲು 5 ಕೋಟಿ ರೂ. ನೀಡಲಾಗಿದೆ. ಸುಮಾರು ಕಳೆದ 20 ವರ್ಷಗಳಿಂದ ಈ ರಸ್ತೆ ಅಭಿವೃದ್ದಿಗೆ ಯಾರು ಮನಸ್ಸು ಮಾಡಿರಲಿಲ್ಲ. ನನ್ನ ಅವಧಿಯಲ್ಲಿ ಈ ರಸ್ತೆ ಅಭಿವೃದ್ದಿಯಾಗುತ್ತಿದೆ ಎಂದು ಎ.ಆರ್.ಕೃಷ್ಣಮುರ್ತಿ ತಿಳಿಸಿದರು.
ಹೊಮ್ಮ ಗ್ರಾಮದ ಪರಿಮಿತಿಯಲ್ಲಿ 20 ಲಕ್ಷ ರೂ. ಅನುದಾನ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಅಸಕ್ತಿ ವಹಿಸಿ 25 ಕೋಟಿ ಗೂ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಈ ಅನುದಾನದಲ್ಲಿ ಸಮುದಾಯಭವನ ಅಭಿವೃದ್ದಿಗೆ ನೀಡಲಾಗಿತ್ತು. ಈ ಬಾರಿ ರಸ್ತೆಗಳ ಅಭಿವೃದ್ದಿಗೆ ಬಳಕೆ ಮಾಡಿಕೊಳ್ಳಲಾಗಿದೆ. ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಹೃದಯ ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುವುದಾಗಿ ಕೃಷ್ಣಮೂರ್ತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ಎಚ್.ವಿ. ಚಂದ್ರು, ಮುಖಂಡರಾದ ಕಂದಹಳ್ಳ ನಂಜುಂಡಸ್ವಾಮಿ, ಎಪಿಎಂಸಿ ನಿರ್ದೇಶಕ ಹೊಮ್ಮ ರವಿಶಂಕರಮೂರ್ತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮು, ಜಿಲ್ಲಾ ಪ್ರಗತಿ ಪರಿಶೀಲನಾ ಸಮಿತಿಯ ಸದಸ್ಯ ಬೂದಂಬಳ್ಳಿ ಶಂಕರ್, ಗೌಡಿಕೆ ಮಹದೇವಸ್ವಾಮಿ, ಆಶ್ವಥ್, ರಾಜೇಶ್, ವೆಂಕಟೇಶ್, ಮಯೂರ, ಕುಮಾರ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *