ಮರಿಯಾಲ ಶ್ರೀಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಗೆ 5 ಲಕ್ಷ ರೂ. ಅನುದಾನ ನೀಡುವೆ : ಮರಿತಿಬ್ಬೇಗೌಡ

ಚಾಮರಾಜನಗರ: ತಮ್ಮ ಶಾಸಕರ ಕ್ಷೇತ್ರ ಅಭಿವೃದ್ದಿ ಅನುದಾನದಲ್ಲಿ 5 ಲಕ್ಷ ರೂ. ಅನುದಾನವನ್ನು ಮರಿಯಾಲ ಶ್ರೀಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ನೀಡುವುದಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಭರವಸೆ ನೀಡಿದರು.

ತಾಲೂಕಿನ ಮರಿಯಾಲದ ಶ್ರೀಮುರುಘರಾಜೇಂದ್ರಸ್ವಾಮಿ ಸಿಬಿಎಸ್ ಇ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಶ್ರೀಮಠದ ಭಕ್ತರಲ್ಲಿ ನಾನೂಒಬ್ಬ. ಶ್ರೀ ಮಠವು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾದದ್ದು, ಇಲ್ಲಿಯ ಅಭಿವೃದ್ದಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ರಾಜಶೇಖರಮೂರ್ತಿ ಅವರು ಶ್ರೀಮಠದ ಭಕ್ತರಾಗಿದ್ದು, ಶ್ರೀಮಠದಲ್ಲಿ ಶಿಕ್ಷಣ ಸಂಸ್ಥೆಗಳು ಬೆಳೆಯುವುದಕ್ಕೆ ಬಹಳಷ್ಠು ಸಹಕಾರ ನೀಡಿದ್ದಾರೆ. ಇಂದು ಭಕ್ತಾಧಿಗಳ ಸಹಕಾರದಲ್ಲಿಶ್ರೀ ಮಠವು ಉತ್ತಮ ಶಿಕ್ಷಣ ಸಂಸ್ಥೆಗಳು ತಂದಿದೆ. ಇದು ಈ ಭಾಗದ ಪೋಷಕರ, ವಿದ್ಯಾರ್ಥಿಗಳ ಸೌಭಾಗ್ಯ ಎಂದು ಭಾವಿಸಿಕೊಳ್ಳಬೇಕಿದೆ ಎಂದರು.

ಈ ಶಾಲೆಯಲ್ಲಿ ೪೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರವುದು ತುಂಭಾ ಸಂತಸವಾಗುತ್ತಿದೆ. ಈ ಗ್ರಾಮೀಣಪ್ರದೇಶ ಇದೊಂದು ವಾತಾವರಣದಲ್ಲಿ  ಶಾಲೆಯಲ್ಲಿ ನುರಿತ ಶಿಕ್ಷಕ ವೃಂದ ಕೆಲಸ ಮಾಡುತ್ತಿದೆ. ಶಿಕ್ಷಕರು ಪ್ರತಿ ಮಕ್ಕಳನ್ನು ಆಧರಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಆಧಾರವಾಗಿಟ್ಟುಕೊಂಡು ಪ್ರೀತಿಯಿಂದ ಗುಣಾತ್ಮಕ ಶಿಕ್ಷಣವನ್ನು ಮಕ್ಕಳಿಗೆ ನೀಡುತ್ತಿದ್ದಾರೆ. ಪೋಷಕರು ನಿತ್ಯ ಮಕ್ಕಳ ಕಲಿಕೆ ಬಗ್ಗೆ ಗಮನಿಸಬೇಕು. ಮಕ್ಕಳ ಜೊತೆ ಶಿಕ್ಷಣ ಬಗ್ಗೆ ಅಸಕ್ತಿ ಮೂಡಿಸಬೇಕು. ಆಗ ಮಕ್ಕಳ ಬೆಳವಣಿಗೆ, ಶಿಕ್ಷಣ ಪ್ರೀತಿ, ವಿಶ್ವಾಸದಿಂದ ಕಲಿಯಲು ಸಾಧ್ಯವಾಗುತ್ತದೆ ಎಂದರು.

ಸ್ವಾವಿವಿವೇಕಾನಂದರು ಹೇಳಿದಂತೆ ವಿದ್ಯಾರ್ಥಿಗಳು ಪಠ್ಯಕ್ರಮದಿಂದ ಕಲಿಯುವುದಕ್ಕಿಂತ ಹೆಚ್ಚಾಗಿ ತಾವು ಶಿಕ್ಷಕರು, ಪೋಷಕರನ್ನು ನೋಡಿ ಕಲಿಯುಸುವುದು ಬಹಳ ಇದೆ. ಶಿಕ್ಷಕರಲ್ಲಿ ಮಾನವೀಯ ಮೌಲ್ಯಗಳು, ಸಂಸ್ಕಾರಗಳು, ನೈತಿಕತೆ ಬದುಕನ್ನು ತಾವು ಕಾಣಬೇಕು ಅದನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಜಗಜ್ಯೋತಿ ಬಸವೇಶ್ವರರ ಚಿಂತನೆಗಳು ಕೂಡ ಸಾಮಾಜಿಕ ಚಿಂತನೆ, ಧಾರ್ಮಿಕ ಚಿಂತನೆಯಾಗಿತ್ತು. ಅವರು ಕೂಡ ಸಮಾನತೆ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಅವರ ವಿಚಾರಧಾರೆಗಳನ್ನು ಮಕ್ಕಳಿಗೆಧಾರೆ ಎರೆಯಬೇಕು ಎಂದರು.

ಕೃಷಿ ಜಂಟಿ ನಿರ್ದೇಶಕ ಡಾ.ಎಂ.ತಿರುಮಲ್ಲೇಶ್, ಹಿರಿಯ  ವಕೀಲರಾದ ಅರುಣ್ ಕುಮಾರ್ ಮಾತನಾಡಿದರು.

ಮರಿಯಾಲದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ ಹಾಗೂ ಮುರುಘರಾಜೇಂದ್ರಸ್ವಾಮಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ ಹಾಗೂ ಚಾಮರಾಜನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವಸ್ವಾಮೀಜಿ ಸಾನಿಧ್ಯವಹಿಸಿದ್ದರು.

ಡಯಟ್‌ನ ಹಿರಿಯ ಉಪನ್ಯಾಸಕ ಯು.ಆರ್.ಲಿಂಗರಾಜೇಅರಸ್ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂ.ಬಸವಣ್ಣ,  ಉಪಾಧ್ಯಕ್ಷ ಜಿ.ಕುಮಾರಸ್ವಾಮಿ, ಆಡಳಿತ ಅಧಿಕಾರಿ  ಆರ್.ಡಿ.ನಾಗರಾಜು, ಪ್ರಾಂಶುಪಾಲ ಗಿರೀಶ್,  ಕರ್ನಾಟಕ ರಾಜ್ಯ ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಧ್ಯಕ್ಷ ವೀರಭದ್ರಸ್ವಾಮಿ,  ಪ್ರಧಾನ ಕಾರ್ಯದರ್ಶಿ ಕಿರಣ್ ರಾಜು, ಕೆ.ಎಸ್.ಷಡಕ್ಷರಿ  ಹಾಗೂ  ಸಂಸ್ಥೆಯ ಆಡಳಿತ ನಿರ್ದೇಶಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *