‘ಎಪಿಎಂಸಿ ಆವರಣದಲ್ಲಿ 80 ನೇ ಸ್ವಾತಂತ್ರೋತ್ಸವ ದಿನಾಚರಣೆ’ 50ಮಂದಿಗೆ ಸಮವಸ್ತ್ರ ವಿತರಣೆ

ಚಾಮರಾಜನಗರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ 80 ನೇ ಸ್ವಾತಂತ್ರೋತ್ಸವ ದಿನಾಚರಣೆ ಆಚರಿಸಲಾಯಿತು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸ್ವಾತಂತ್ರೋತ್ಸವದ ಜಯಘೋಷ ಕೂಗಿದರು.
ಇದೇವೇಳೆ ಎಪಿಎಂಸಿ ಅಧ್ಯಕ್ಷ ಎಂ.ಬಿ.ಗುರುಸ್ವಾಮಿ ಧ್ವಜಾರೋಹಣ ನೆರವೇರಿಸಿದರು.
ಪರವಾನಗಿ ಪಡೆದ 50ಮಂದಿ ಹಮಾಲಿಗಳಿಗೆ ಸಮವಸ್ತ್ರ ವಿತರಣೆ ಮಾಡಿದರು.
ಎಪಿಎಂಸಿ ಸದಸ್ಯರಾದ ಎ.ಎಸ್.ಪ್ರದೀಪ್, ವೆಂಕಟರಾವ್‍ಸಾಠೆ, ಸೋಮೇಶ್, ಎಂ.ಮಹೇಶ್, ಕಲಾವತಿ, ಎಪಿಎಂಸಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಎ.ಜಿ. ಬಸವಣ್ಣ, ಎಪಿಎಂಸಿ ಕಾರ್ಯದರ್ಶಿ ಬಿ. ಜಗದೀಶ್, ಸಹಾಯಕ ಕಾರ್ಯದರ್ಶಿ ಮಧುಕುಮಾರ್, ಸಿಬ್ಬಂದಿವರ್ಗ ಹಾಜರಿದ್ದರು.

Leave a Reply

Your email address will not be published. Required fields are marked *