- ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ಕಾರ್ಯಾಗಾರ ಆಯೋಜನೆ
ಚಾಮರಾಜನಗರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇದೇ 30 ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನಾ), ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ ಸರ್ಕಾರದ ವಾರ್ತಾ ಶಾಖೆಯ ಕರ್ನಾಟಕದ ಹೆಚ್ಚುವರಿ ಮಹಾ ನಿರ್ದೇಶಕರಾದ ಎಸ್.ಜಿ. ರವೀಂದ್ರ, ಜಿಲ್ಲಾಧಿಕಾರಿಗಳಾದ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ. ರಮೇಶ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಉದ್ಘಾಟನೆ ನಂತರ ಕಾರ್ಯಾಗಾರದಲ್ಲಿ ಕೇಂದ್ರ ಸರ್ಕಾರದ 12ನೇ ವರ್ಷದ ವಿಶೇಷ ಅಭಿಯಾನದ ಭಾಗವಾಗಿ ವಿವಿಧ ಇಲಾಖೆಗಳ ಜನಪರ ಕಾರ್ಯಚಟುವಟಿಕೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ಹಂಚಿಕೊಳ್ಳಲಿದ್ದಾರೆ. ‘ಬುಡಕಟ್ಟು ಸಮುದಾಯಗಳ ಸಬಲೀಕರಣ’ ಕುರಿತು ಚಾಮರಾಜನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಿಂಧ್ಯಾ ಹೆಚ್.ಎಸ್. ಅವರು ಮಾಹಿತಿ ನೀಡಲಿದ್ದಾರೆ. ‘ಮಹಿಳೆ ಮತ್ತು ಮಕ್ಕಳ ಸಶಕ್ತೀಕರಣ’ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣ ಅಧಿಕಾರಿಗಳಾದ ಮಂಜುಳಾ ಬಿ., ‘ಸಮೃದ್ಧ ರಾಷ್ಟ್ರ್ರಕ್ಕಾಗಿ ರೈತ ಕಾರ್ಯಕ್ರಮಗಳ’ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಭಾನು ಪ್ರಕಾಶ್ ಯು.ಹೆಚ್. ಅವರು ‘ಆರ್ಥಿಕ ಸೇರ್ಪಡೆ’ ಕುರಿತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕರಾದ ಸುರೇಖಾ ಎಂ. ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Like this:
Like Loading...
Related