ಚಾಮರಾಜನಗರ: ಗಡಿಭಾಗದ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮೂಡಹಳ್ಳಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ವಿ.ಬಾಯಿ ಗಣೇಶ್ ಹಾಗೂ ಸದಸ್ಯರು ಸೇರಿದಂತೆ ಇನ್ನಿತರರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗ್ರಾಮಕ್ಕೆ ಬರಮಾಡಿಕೊಂಡರು.
ನಂತರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ವಿ.ಬಾಯಿ ಗಣೇಶ್ ಉದ್ಘಾಟಿಸಿದರು.
ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಚಿಕ್ಕಬಸವಯ್ಯ ಮಾತನಾಡಿ, ಈಗಾಗಲೇ ರಾಜ್ಯ ಸರ್ಕಾರದಿಂದ ಸಂವಿಧಾನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ನಗರಸಭೆಯಿಂದ ಪ್ರಾರಂಭ ಮಾಡಿ ನಾಗವಳ್ಳಿ, ಚಂದಕವಾಡಿ ಸೇರಿದಂತೆ ಪುಣಜನೂರು ಗ್ರಾಮ ಪಂಚಾಯಿತಿ ವರೆಗೂ ಕೂಡಾ ಜಾಥಾ ನಡೆಸುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕೂಡಾ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮೂಕನಪಾಳ್ಯ, ಕೋಳಿಪಾಳ್ಯ, ಪುಣಜನೂರು ಗೇಟ್ ವರೆಗೂ ಕೂಡಾ ಆಯಾ ಭಾಗದ ಶಾಲೆಗಳ ಮಕ್ಕಳಿಂದ ಮೆರವಣಿಗೆ ಸಂದರ್ಭ ಪುಷ್ಪಾರ್ಚನೆ ಮಾಡಿಸುವ ಮೂಲಕ ಶಾಲಾ ಮಕ್ಕಳು ಆಯಾ ಶಾಲೆಗಳ ಮುಂಭಾಗ ಸಂವಿಧಾನ ಪೀಠಿಕೆಯನ್ನು ಓದಿದರು.
ಶಿಕ್ಷಕಿ ವಂಸತ ಅವರು ಮಾತನಾಡಿ, ಸಂವಿಧಾನ ಜಾಗೃತಿ ಸಂಬಂಧಿಸಿದಂತೆ ಸುಧೀರ್ಘವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಚಪ್ಪ, ಸದಸ್ಯರಾದ ಮಹೇಶ್ ನಾಯಕ, ಗಂಗಾಶಂಕರ್, ಚಂದ್ರಶೇಖರ್ ಎಸ್., ಗೀತಾ ಸಿದ್ದರಾಜು, ಮಾಜಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಚ್.ಮೂರ್ತಿ, ಶಾಮೀರ್ ಪಾಷಾ, ನೋಡಲ್ ಅಧಿಕಾರಿ ಮಹದೇವಶೆಟ್ಟಿ, ಪಿಡಿಓ ಸಿದ್ದರಾಜು, ವಾಟರ್ ಮ್ಯಾನ್ ಮಹದೇವನಾಯಕ, ಗ್ರಂಥಾಲಯ ಮೇಲ್ವಿಚಾರಕ ವೆಂಕಟೇಶ್, ರಾಮಸಮುದ್ರ ಮಹೇಶ್, ಶಿಕ್ಷಕಿ ವಸಂತ ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು, ಮುಖಂಡರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.