ಕ್ರೀಡಾಕೂಟದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಚಾಮರಾಜನಗರ ಸ 29 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷದ ವಿಷಯ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಬಿ ಎಸ್ ಮಹದೇವಸ್ವಾಮಿ ಮೆಚ್ಚಿಗೆ ವ್ಯಕ್ತಪಡಿಸಿದರು.


ಚಾಮರಾಜನಗರ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಶ್ರೀ ವಾಸವಿ ಪ್ರಥಮ ದರ್ಜೆ ಕಾಲೇಜು ಕೊಳ್ಳೇಗಾಲ ಸಹಯೋಗದಲ್ಲಿ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಮಹಿಳೆಯರ ಗುಡ್ಡಗಾಡು ಓಟ ಕ್ರೀಡಾಕೂಟದಲ್ಲಿ ಕಾಲೇಜಿನ 15 ವಿದ್ಯಾರ್ಥಿನಿಯರು ಭಾಗವಹಿಸಿದ್ದು ಸಿ ಸಂಜನಾ , ದ್ವಿತೀಯ ಸ್ಥಾನ ಶಶಿಕಲಾ, ತೃತೀಯ ಸ್ಥಾನ ಪಡೆದು ಹಾಗೂ ಒಟ್ಟು 30 ಅಂಕಗಳನ್ನು ಪಡೆದು ಅಂತ ಕಾಲೇಜು ತಂಡಗಳ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದಾರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ಶಾಂತರಾಜು ಕಠಿಣ ಪರಿಸರಮದಿಂದ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡಾಕೂಡದಲ್ಲಿ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆಯುವುದಕ್ಕೆ ಅನುಕೂಲ ಆಯ್ತು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು

ಚಾಮರಾಜನಗರ ವಿಶ್ವವಿದ್ಯಾಲಯ ದೈಹಿಕ ವಿಭಾಗದ ನಿರ್ದೇಶಕ. ಹಾಗೂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶಾಂತರಾಜು ಕಾಲೇಜು ಮಾತನಾಡಿ, ಎಲ್ಲಾ ಕ್ರೀಡಾಪಟುಗಳು ತರಬೇತಿ ಸಮಯದಲ್ಲಿ ಉತ್ತಮವಾಗಿ ಭಾಗವಹಿಸಿದ್ದು ಇದರ ಪ್ರತಿಫಲವಾಗಿ ಇಂದು ಸಮಗ್ರ ಪ್ರಶಸ್ತಿ ಪಡೆಯುವುದಕ್ಕೆ ಸಹಕಾರಿಯಾಯಿತು ಸಿ ಸಂಜನಾ ಮತ್ತು ಶಶಿಕಲಾ ಇಬ್ಬರು ಕ್ರೀಡಾಪಟುಗಳು ಮಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಗುಡ್ಡಗಾಡು ಓಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ ಅವರಿಗೆ ಉತ್ತಮ ತರಬೇತಿ ನೀಡುತ್ತೇನೆಂದು ಅದರ ಸದುಪಯೋಗ ಎಲ್ಲಾ ಕ್ರೀಡಾಪಟುಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರು ಕ್ರೀಡೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಹಿನ್ನೆಲೆಯಲ್ಲಿ ಈ ಸಾಧನೆ ಮಾಡಲು ಅನುಕೂಲ ಆಯಿತು ಎಂದು ತಿಳಿಸಿದರು

ಚಾಮರಾಜನಗರ ವಿಶ್ವವಿದ್ಯಾನಿಲಯ ಕ್ರೀಡಾ ಸಲಹಾ ಸಮಿತಿ ಸದಸ್ಯ ಜಿ ಬಂಗಾರು ಮಾತನಾಡಿ ಗಡಿಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶಗಳಿದ್ದು ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿಕೊಂಡು ಬರುತ್ತಿದ್ದಾರೆ.


ವಿಶೇಷ ವಾಗಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ಭಾಗವಹಿಸುವುದೇ ಕಡಿಮೆ ಆದರೆ ದೈಹಿಕ ನಿರ್ದೇಶಕರಾದ ಡಾ. ಶಾಂತರಾಜು ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿನಿಯರು ತರಬೇತಿ ಪಡೆದು ಸಮಗ್ರ ಪ್ರಶಸ್ತಿ ಪಡೆಯುತ್ತಿರುವುದು ಉತ್ತಮಸಾಧನೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು . ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ವತಿಯಿಂದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಉಚಿತವಾಗಿ ಕ್ರೀಡಾ ಸಾಮಗ್ರಿಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರೊಫೆಸರ್ ಹಾಗೂ ಕ್ರೀಡಾ ಸಮಿತಿ ಸದಸ್ಯರಾದ ಶೈಲೇಶ ಕುಮಾರ್ ಸಿ, ಡಾ. ಪ್ರಸಾದ್,, ಪರಮೇಶ್ ಎಂ ಸಿ, ರೂಪದೇವಿ ಪಿ. ಕಾಲೇಜಿನ ಮ್ಯಾನೇಜರ್ ಸಾಕಮ್ಮ ಕ್ರೀಡಾಪಟು ವಿದ್ಯಾರ್ಥಿನಿಯರು ಹಾಜರಿದ್ದರು.

Leave a Reply

Your email address will not be published. Required fields are marked *