ಜಿಲ್ಲಾ ಮಟ್ಟದ ಸುಸಜ್ಜಿತ ಗುರುಭವನ ನಿರ್ಮಾಣಕ್ಕೆ ಕ್ರಮ : ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜಿಲ್ಲಾ ಮಟ್ಟದ ಸುಸಜ್ಜಿತ ಗುರುಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ಪಶು ಸಂಗೋಪನೆ, ರೇಷ್ಮೆ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.
    ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ, ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿರವರಿಗೆ ಅಭಿನಂದನೆ, 2026-31ರ ಅವಧಿಯ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಶಿಕ್ಷಕರಿಗೆ ಕೃತಜ್ಞತಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
    ಯಡಬೆಟ್ಟ ಸಮೀಪದಲ್ಲಿ ಹೊಸ ಬಡಾವಣೆಗೆ ಜಾಗ ಗುರುತಿಸಿದ್ದು ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತದೆ.ನಿಮ್ಮ ಬೇಡಿಕೆಯಂತೆ ಅಲ್ಲಿ ಜಾಗ ನೀಡಿ ಜಿಲ್ಲಾ ಮಟ್ಟದ ಸುಸಜ್ಜಿತ ಗುರುಭವನ ನಿರ್ಮಿಸಲಾಗುವುದು ಎಂದರು.
    ಬಿಸಿಯೂಟದ ತರಕಾರಿ, ಮೊಟ್ಟೆ ಖರೀದಿಸಲು ಶಿಕ್ಷಕರಿಗೆ ಹೊರೆಯಾಗಿದ್ದು, ಇದರಿಂದ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲು ಆಗುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಹೊಸ ಕಚೇರಿ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ್ದೀರಿ. ಶಿಕ್ಷಕರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಚರ್ಚಿಸಿ ಪರಿಹರಿಸಲು ಪ್ರಯತ್ನ ಮಾಡುವುದಾಗಿ ಸಚಿವರು ಹೇಳಿದರು.
   ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕವು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಿಕ್ಷಕರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಮೂಲಕ ಅವರ ಹೆಚ್ಚಿನ ಓದಿಗೆ ಪ್ರೇರೆಸುವುದು ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಎಂದರು.
  ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ಮಾತನಾಡಿ, ಬಿಸಿಯೂಟದ ಉಚಿತ ಮೊಟ್ಟೆ ಜವಾಬ್ದಾರಿ ಏಜೆಸ್ಸಿ ಗೆ ಕೊಡಬೇಕು.  ಜಿಲ್ಲಾ ಮಟ್ಟದ ಗುರುಭವನ ಆಗಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಆಗಬೇಕು. ರಾಜ್ಯ  ಸಮೀಕ್ಷೆಗಳಿಗೆ ಶಿಕ್ಷಕ ನೇಮಿಸಬಾರದು, ಗಳಿಕೆ ರಜೆ ನೀಡಬೇಕು . ಶಿಕ್ಷಕನ್ನು ಇತರ ಕೆಲಸಗಳಿಗೆ ನಿಯೋಜಿಸದೆ ಭೋದನೆ ಸೀಮಿತಗೊಳಿಸಬೇಕಿದೆ ಎಂದರು.
ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
     ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ದಾನಿಗಳಿಗೆ ಸನ್ಮಾನ : ಬಿವಿಎಸ್ ಪ್ರತಿಷ್ಠಾನದ ವೆಂಕಟನಾಗಪ್ಪಶೆಟ್ಟಿ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಮಾಜಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಸಿದ್ದಯ್ಯನಪುರ ಸರ್ಕಾರಿ ಶಾಲೆ ಶಿಕ್ಷಕ ನಾರಾಯಣ್, ಚೇತನ್ ಕಲಾವಾಹಿನಿ ಸಂಸ್ಥೆ ಯ ಅಧ್ಯಕ್ಷ ರಾಜಪ್ಪ, ಬದನಗುಪ್ಪೆ ಶಿಕ್ಷಕಿ ಮಂಜುಳ, ಟಿವಿಎಸ್ ಕಂಪನಿ, ಬಸವರಾಜೇಂದ್ರ ಟ್ರಸ್ಟ್ ಅವರನ್ನು ಸನ್ಮಾನಿಸಲಾಯಿತು.
ಸಾಹಿತಿ ದೇವನೂರು ಮಹೇಂದ್ರಕುಮಾರ್ ಮುಖ್ಯ ಭಾಷಣ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಾದಪ್ಪ ಪ್ರಾಸ್ತಾವಿಕ ಭಾಷಣ ಮಾಡಿದರು. ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಮಾತನಾಡಿದರು.ಕಾರ್ಯಕ್ರಮದಲ್ಲಿ
ಬಿಇಓ ಹನುಮಶೆಟ್ಟಿ, ಬಿಎಸ್ ವಿ ಪ್ರತಿಷ್ಠಾನದ ವೆಂಕಟನಾಗಪ್ಪಶೆಟ್ಟಿ,  ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಮಾಜಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಉಪಾಧ್ಯಕ್ಷ ಶಿವಪ್ರಸಾದ್, ಭವಾನಿದೇವಿ, ಖಜಾಂಚಿ ನಂದೀಶ್, ಸಹ ಕಾರ್ಯದರ್ಶಿ ಉಮೇಶ್, ಸಂಘಟನಾ ಕಾರ್ಯದರ್ಶಿ ಶಿವರಾಜ್, ತಾಲೂಕು ಕಾರ್ಯದರ್ಶಿ ಎನ್.ಸುಧಾ, ಉಪಾಧ್ಯಕ್ಷರಾದ ಸಿ.ಎಂ.ಸುಶೀಲ, ಧನಂಜಯ, ಸಹ ಕಾರ್ಯದರ್ಶಿ ಬಿ.ಕೃಷ್ಣಮೂರ್ತಿ, ಬಿ.ಎಸ್.ಲತಾ, ಸಂಘಟನಾ ಕಾರ್ಯದರ್ಶಿಗಳಾದ ಭರತ್ ಭೂಷಣ್, ಎನ್.ಶ್ವೇತ  ಇತರರು ಹಾಜರಿದ್ದರು.

Leave a Reply

Your email address will not be published. Required fields are marked *