ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದ ವಕೀಲ ಎಂ.ಚಿನ್ನಸ್ವಾಮಿ

  • ಕೆಪಿಸಿಸಿ ಕಾನೂನು ವಿಭಾಗದ ರಾಜ್ಯ ಕಾರ್ಯದರ್ಶಿ ವಕೀಲ ಎಂ. ಚಿನ್ನಸ್ವಾಮಿರವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆಗಳು
    ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ಕಾವೇರಿ ನಿವಾಸದಲ್ಲಿ ಕನಿಷ್ಟ ವೇತನ ಮಂಡಳಿಯ ಮಾಜಿ ಅಧ್ಯಕ್ಷ ಕೆಪಿಸಿಸಿ ಕಾನೂನು ವಿಭಾಗದ ರಾಜ್ಯ ಕಾರ್ಯದರ್ಶಿಯಾದ ವಕೀಲ ಎಂ. ಚಿನ್ನಸ್ವಾಮಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
      ಹಿರಿಯ ನಾಯಕ ಮಾಜಿ ಮುಖ್ಯ ಮಂತ್ರಿ ದಿ.ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಹೊಸ ಇತಿಹಾಸ ನಿರ್ಮಿಸಿದ್ದಾರೆ ಅವರಿಗೆ ದೇವರು ಉತ್ತಮ ಆರೋಗ್ಯ, ಸುಖ ಶಾಂತಿ ಕರುಣಿಸಿ, ಇನ್ನಷ್ಟು ಕಾಲ ರಾಜ್ಯದ ಸೇವೆ ಮಾಡಲಿ ಎಂದು ಶುಭ ಕೋರಿದರು.

Leave a Reply

Your email address will not be published. Required fields are marked *