ಸಚಿವ ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ವಕೀಲ  ಆರ್. ಅರುಣ್‌ಕುಮಾ‌ರ್ ಆಗ್ರಹ

ಚಾಮರಾಜನಗರ: ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ವಕೀಲ ಆ‌ರ್.ಅರುಣ್ ಕುಮಾರ್ ಒತ್ತಾಯಿಸಿದರು.
   ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರು ರಾಜ್ಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದು, ವಿರೋಧ ಪಕ್ಷದಲ್ಲಿದ್ದಾಗ ಬಿಟ್‌ ಕಾಯಿನ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಶೇ.40% ಕಮಿಷನ್ ಆರೋಪ, ಕೋವಿಡ್ ಅವಧಿಯ ಅವ್ಯವಹಾರ ಹಾಗೂ ಗಂಗಾ ಕಲ್ಯಾಣ ಯೋಜನೆಯ
ಅಕ್ರಮಗಳಂತಹ ವಿಷಯಗಳನ್ನು ನಿರಂತರವಾಗಿ ಪ್ರಸ್ತಾಪಿಸಿ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದಾರೆ ಕಾಂಗ್ರೆಸ್ ಗೆ ಒಳ್ಳೆಯ ಹೆಸರು ತಂದು ಕೊಡುವ ಮೂಲಕ ಸಂಘಟನೆ ಮಾಡುತ್ತಿದ್ದಾರೆ ಎಂದರು.
ಅಲ್ಲದೇ ಪ್ರಿಯಾಂಕ್ ಖರ್ಗೆ ಅವರು ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು ಅವರಿಗೆ ಆಡಳಿತಾತ್ಮಕ ಅನುಭವವಿದ್ದು, ತಮಗೆ ವಹಿಸಲಾದ ವಿವಿಧ ಇಲಾಖೆಗಳ ನಿರ್ವಹಣೆಯಲ್ಲಿ ದಕ್ಷತೆ ತೋರಿದ್ದಾರೆ. ಆದ್ದರಿಂದ ಪ್ರಿಯಾಂಕ್ ಖರ್ಗೆಗೆ ಈ ಬಾರಿ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೇಂದ್ರ, ರಾಜ್ಯ ವರಷ್ಟರನ್ನು ಆಗ್ರಹಿಸಿದರು
ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ನಾಗಾರ್ಜುನ್ ಪೃಥ್ವಿ, ನಾಗಮ್ಮ, ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಮೋಹನ್ ನಗು, ತಾ.ಪಂ.ಮಾಜಿ ಸದಸ್ಯ ಕುಮಾರನಾಯ್ಕ, ,ರಾಜು ಹಾಜರಿದ್ದರು.

Leave a Reply

Your email address will not be published. Required fields are marked *