ಚಾಮರಾಜನಗರ ಮುಂದುವರಿದ ಜಿಲ್ಲೆ ಮಾಡುವ ಗುರಿ

  • ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ
  • ಜಿಲ್ಲೆಯ ಪ್ರವಾಸೋದ್ಯಮ, ಮಾನವ -ಪ್ರಾಣಿ ಸಂಘರ್ಷ ತಡೆಗೆ, ಬಾಲ್ಯ ವಿವಾಹ ಮುಕ್ತ ಜಿಲ್ಲೆ ಮಾಡಲು ಚಿಂತಿಸಲಾಗಿದೆ.

ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ  ಹಿಂದುಳಿದ ಜಿಲ್ಲೆಯ ಹಣೆಪಟ್ಟಿ ಕಳಚಿ ಮುಂದುವರಿದ ಜಿಲ್ಲೆಯಾಗಿ ಮಾಡುವ ಚಿಂತನೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು.
 ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು
ಜಿಲ್ಲೆಯಲ್ಲಿ ಶೇ.52 ರಷ್ಟು ಅರಣ್ಯ ಪ್ರದೇಶವಿದ್ದು ಮಹದೇಶ್ವರಬೆಟ್ಟ, ಬಿಳಿಗಿರಿರ ಂಗನಬೆಟ್ಟ, ಹಿಮವದ್ ಗೋಪಾಲಸ್ವಾಮಿಬೆಟ್ಟ ಸೇರಿದಂತೆ ಇತರೆ ಪ್ರವಾಸಿ ತಾಣಗಳಿವೆ. ಇವುಗಳನ್ನು ಹೊರತುಪಡಿಸಿ ಉಳಿದ ಹಲವು ಪ್ರವಾಸಿ ತಾಣಗಳು ಜಿಲ್ಲೆಯಲ್ಲಿದ್ದು ಅವುಗಳನ್ನು ಅಭಿವೃದ್ಧಿಪಡಿಸಿ ಜಿಲ್ಲೆಯ ಯುವಜನತೆಗೆ ಉದ್ಯೋಗ ಕೊಡಬೇಕು. ಆ ಮೂಲಕ ವಿದೇಶಿಯರನ್ನು ಆಕರ್ಷಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದರು.
ಈಗಾಗಲೇ ಸುವರ್ಣಾವತಿ ಜಲಾಶಯದಲ್ಲಿ ಜಲಕ್ರೀಡೆ ಆಯೋಜಿಸಲಾಗಿದ್ದು ಅಲ್ಲಿಯೂ ಪ್ರವಾಸಿ ತಾಣವನ್ನಾ ಗಿ ಗುವುದು. ಚಾ.ನಗರದಲ್ಲಿ
ಪಾರ್ಕ್‌ಗಳ ಅಭಿವೃದ್ಧಿ ಹಾಗೂ ನಿರ್ಮಾಣಕ್ಕೆ ಕ್ರಮವಹಿಸ ಲಾಗುವುದು ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಹೆಚ್ಚಾಗಿದ್ದು ಜಿಲ್ಲೆಯ ಒಂದೊಂದು ತಾಲೂಕಿನಲ್ಲಿ ಯೂ ತಲಾ ಒಂದೊಂದು ಗ್ರಾಮವನ್ನು ಆಯ್ಕೆ మాడిండు బాల్యవివార ಮುಕ್ತ ಗ್ರಾಮವನ್ನಾಗಿ ಮಾಡಲು ಕ್ರಮವಹಿಸಲಾಗುವುದು. ಹನೂರು ತಾಲೂಕು ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಅಭಿವೃದ್ಧಿಪಡಿಸಿ ವಾರಾಂ ತ್ಯದಲ್ಲಿ ಅವಕಾಶ ಕಲ್ಪಿಸಿದರೆ ಹೆಚ್ಚಿನ ಪ್ರವಾಸಿಗರು ಬರಲಿ ದ್ದಾರೆ. ಕುಶಾಲನಗರ ಮಾದರಿ ಯಲ್ಲಿಯೇ ಒಡೆಯರಪಾಳ್ಯ ಟಿಬೆಟಿಯನ್ ಕ್ಯಾಂಪ್ ಅನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಯೋಜಿಸಲಾಗು ವುದು ಎಂದು ಹೇಳಿದರು. ಇದರೊಂದಿಗೆ ಕೃಷಿ ಪ್ರವಾಸೋದ್ಯಮಕ್ಕೂ ಗಮನಹರಿಸಲಾಗುವುದು. ಅಲ್ಲದೇ ಜಿಲ್ಲೆಯಲ್ಲಿನ ಮಾನವ-ಪ್ರಾಣಿ ಸಂಘರ್ಷ ತಡೆಗೆ ಯೋಜನೆ ರೂಪಿಸಲಾಗಿದೆ ಎಂದರು.
ಜಿಲ್ಲೆಯ ಕಾಡಂಚಿನ ಗ್ರಾಮಗ ಳಲ್ಲಿ ರೇಷ್ಮೆ ಬೆಳೆಗೆ ಪ್ರೋತ್ಸಾ ಹಿಸುವ ಮೂಲಕ ಕಾಡುಪ್ರಾ ಣಿಗಳ ಹಾವಳಿ ತಪ್ಪಿಸಬಹುದು. ಆ ನಿಟ್ಟಿನಲ್ಲಿ ರೇಷ್ಮೆ ಬೆಳೆ ಬೆಳೆಯಲು ರೈತರಿಗೆ ಅರಿವು ಮೂಡಿಸಲು ಕ್ರಮವಹಿಸ ಲಾಗುವುದು, ಏರೋ ವಾಟರ್ ಘಟಕಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
  ಚಾ.ನಗರವನ್ನು ಸ್ವಚ್ಛ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರಿಂದ ಸ್ವಚ್ಛಗೊಳಿಸಿದ ನಂತರ ಸಿಸಿ ಕ್ಯಾಮರಾ ಕಣ್ಣಾವಲಿನ ಮೂಲಕ ಆ ನಂತರ ಕಸ ಹಾಕುವವರಿಗೆ ದಂಡ ವಿಧಿಸಲು ಕ್ರಮವಹಿಸಲಾಗುವುದು. ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ
ಮಾಡಲಾಗುವುದು ಎಂದು ಹೇಳಿದರು.ಸಂವಾದದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್.ಸಿದ್ದಲಿಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. , ಪ್ರಧಾನ ಕಾರ್ಯದರ್ಶಿ ಲಕ್ಕೂರು ಎಸ್. ಪ್ರಸಾದ್ , ಪತ್ರಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *