ಚಾಮರಾಜನಗರ : ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಕುಮಾರ್ ಅವರ 30 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಾಮಸಮುದ್ರ ಗೆಳೆಯರ ಬಳಗದ ವತಿಯಿಂದ ನಗರದ ಜೋಡಿರಸ್ತೆಯಲ್ಲಿರುವ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಯಿತು.
ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಸ್ವಾಮಿ ಮಾತನಾಡಿ,ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಕುಮಾರ್ ಅವರ 30ನೇ ವರ್ಷದ ಹುಟ್ಟುಹಬ್ಬವನ್ನು ಸೇವಾ ಕಾರ್ಯಗಳ ಮೂಲಕ ಆಚರಿಸಲಾಯಿತು. ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಲಿ, ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನಮಾನ ದೊರಕಲಿ ಎಂದು ಆಶಿಸಿದರು.
ಅಭಿಮಾನಿಗಳಾದ ಶಿವಾರ್ಜನ್, ರಾಜು ಇತರರು
ಹಾಜರಿದ್ದರು .