ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 47 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದ್ದಾರೆ.
ಪರಿಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯದ ವೆಬ್ ಕಾಸ್ಟಿಂಗ್ ಗೆ ಕ್ರಮ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಓ.ಆರ್.ಎಸ್.ಹಾಗೂ ಸಾಮಾನ್ಯ ಔಷಧೋಪಚಾರ ಕಿಟ್‍ನೊಂದಿಗೆ ಆರೋಗ್ಯ ಇಲಾಖೆ ವತಿಯಿಂದ ಶುಶ್ರೂಷಕರನ್ನು ನಿಯೋಜಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ಹಾಜರುಪಡಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ಕೇದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದು.
ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಈಗಾಗಲೇ ಅನುಷ್ಠಾನಗೊಳಿಸಲಾಗಿದೆ.
ವಿಧ್ಯಾರ್ಥಿಗಳು ಯಾವುದೇ ಆತಂಕಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗಬೇಕು ವಿಧ್ಯಾರ್ಥಿಗಳು ಉತ್ತಮ ಸಾಧನೆ ಮಾಡಲೆಂದು ಶುಭ ಕೋರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.