ಅಂಬೇಡ್ಕ‌ರ್ ಅವರು ಸರ್ವರಿಗೂ ಸಮಾನತೆ ಕಲ್ಪಿಸಿದರು : ಸಿ.ಕೆ.ಮಂಜುನಾಥ್

ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಡಾ.ಬಿ.ಆ‌ರ್.ಅಂಬೇಡ್ಕರ್ ಮಹಾಸಭಾ ಕಾರ್ಯಾಧ್ಯಕ್ಷ ಸಿ. ಕೆ.ಮಂಜುನಾಥ್ ಹೇಳಿದರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಮಹಾಸಭಾ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯ ಅಂಗವಾಗಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಬರೆಯುವ ಚಿತ್ರಕಲಾ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಅಂಬೇಡ್ಕ‌ರ್ ಅವರು ವಿದ್ಯಾರ್ಥಿಜೀವನದಲ್ಲೇ ಸಾಕಷ್ಟು ನೋವು ಅನುಭವಿಸಿದರು. ತುಂಬಾ ಕಷ್ಟದಲ್ಲೇ ವಿದೇಶದಲ್ಲಿ ವ್ಯಾಸಂಗ ಮಾಡಿ ಅಪಾದ ವಿದ್ಯಾತ್‌ಗಳಿಸಿ ವಿಶ್ವಜ್ಞಾನಿಯಾಗಿದ್ದಾರೆ. ಅವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾವು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಬರೆಯುವ ಚಿತ್ರಕಲಾ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆ ಅಯೋಜಿಸಿದೆ ಎಂದರು.
ಅಂಬೇಡ್ಕ‌ರ್ ಅವರು ಪರಿಶ್ರಮದಿಂದ ನಾವೆಲ್ಲರೂ ನೆಮ್ಮದಿಯಾಗಿ ಬದುಕು ಸಾಗಿಸುತ್ತಿ
ದ್ದೇವೆ. ಅವರು ಸ್ವಂತ ಕುಟುಂಬ, ಸ್ವಂತ ಜೀವನವನ್ನು ತ್ಯಾಗ ಮಾಡಿದ್ದಾರೆ. ಆದುದ್ದರಿಂದ ನಾವು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು. ಅವರು ರಚಿಸಿಕೊಟ್ಟಿರುವ ಸಂವಿಧಾನ ಸಮೃದ್ಧ ಭಾರತದ. ನಿರ್ಮಾಣಕ್ಕೆ ಕಾರಣೀಭೂತವಾಗಿದೆ ಎಂದರು.
ಕಾರ್ಯಕ್ರಮದಲ್ಲಿ..ಹಿರಿಯ ಕಲಾವಿದರಾದ ಮಹದೇವ್ರು, ಮಹಮ್ಮದ್ ಗೌಸ್, ಸಮಾಜ ಕಲ್ಯಾಣ ಇಲಾಖೆ ವಾರ್ಡ್‌ನ್ ರಾಜು, ಪವನ್ ಸೇವಾ ಟ್ರಸ್ಟ್ ಕಾರ್ಯದರ್ಶಿ ವೀಣಾ, ಜಯಶಂಕರ್, ಕಾರ್ಯಕ್ರಮ ಸಂಯೋಜಕ ಸಿ.ಎನ್.ಸಂಪತ್‌ಕುಮಾರ್, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *