ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಣೆ: ಡಿಸಿಗೆ ಸನ್ಮಾನ

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ  ಆಚರಣೆ ಮಾಡಿದ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ ಬಣದ ವತಿಯಿಂದ ಜಿಲ್ಲಾಧಿಕಾರಿ ಶ್ರೀರೂಪ ಅವರನ್ನು  ಸನ್ಮಾನಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ
ದಲಿತ ಸಂಘರ್ಷ ಸಮಿತಿಯ ಡಿ.ಜಿ.ಸಾಗರ ಬಣದ ಜಿಲ್ಲಾ ಸಂಯೋಜಕ ಸಿ.ಎಂ.ಶಿವಣ್ಣ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮೈಸೂರುಪೇಟ ಧರಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು.
  ಈ ಸಂದರ್ಭದಲ್ಲಿ ಆಟೋ ಉಮೇಶ್, ಸಿದ್ದಪ್ಪ ಎಸ್, ಚಂದ್ರಶೇಖರ್, ಪ್ರಕಾಶ್, ಮಲ್ಲಿಕಾರ್ಜುನ, ಪ್ರಕಾಶ್, ಚೇತನ್, ಕುಮಾರ್ ಹಾಜರಿದ್ದರು.

Leave a Reply

Your email address will not be published. Required fields are marked *