ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ
ಚಾಮರಾಜನಗರ: ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮಾದಪ್ಪ ಬಣ್ಣಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 135 ಜನ್ಮದಿನಾಚರಣೆ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿ ಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ಜಾತಿ, ಲಿಂಗ, ಧರ್ಮದ ಭೇದವಿಲ್ಲದೆ, ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು, ಹಕ್ಕುಗಳು ಮತ್ತು ಗೌರವ ಸಿಗಬೇಕು ಎಂದು ಪ್ರತಿಪಾದಿಸಿದರು. ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆ, ಶಿಕ್ಷಣ, ಮತ್ತು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸಿದರು ಎಂದರು.
ಜ್ಞಾನದ ಮೂಲಕ ಸಬಲೀಕರಣ, ಇದು ಸಾಮಾಜಿಕ ಗುಲಾಮಗಿರಿಯನ್ನು ಹೋಗಲಾಡಿಸುವ ಅಸ್ತ್ರ ಎಂದು ನಂಬಿದ್ದರು. ದೀನದಲಿತರು, ಹಿಂದುಳಿದವರು ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದರು.
ಪ್ರತಿಯೊಬ್ಬ ವ್ಯಕ್ತಿಗೂ ಸ್ವಾಭಿಮಾನ ಮತ್ತು ಘನತೆಯಿಂದ ಬದುಕುವ ಹಕ್ಕು ನೀಡಿದರು.
ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತೀಯರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದರು. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಅವರ ಮಾರ್ಗದಲ್ಲಿ ಸಾಗೋಣ ಎಂದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ, ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಕಾರ್ಯದರ್ಶಿ ಸುಧಾ ಎನ್
ಪದಾಧಿಕಾರಿಗಳಾದ ಎಂ.ಡಿ ಮಹಾದೇವಯ್ಯ ಡಿ ಎನ್. ಭಾರತ್ , ಬಿ. ಕೃಷ್ಣಮೂರ್ತಿ ,ರಾಜು ,ಎಸ್ ಜಿ ವಿ ಶಾಂತರಾಜ್, ಶಿವಕುಮಾರ್ , ಎಸ್.ಬಿ ರಾಜು , ಸಮೀಉಲ್ಲಾ, ಧನಂಜಯ್, ಎಂ.ಪುಟ್ಟಸ್ವಾಮಿ, ಸಿ.ಎಂ.ಮುರುಗೇಶ್ ಕುಮಾರ್,ನಂಜುಂಡಸ್ವಾಮಿ, ಎನ್.ಎಸ್.ಮಹಾದೇವಸ್ವಾಮಿ, ಎಂ.ಶಿವಕುಮಾರ್, ಪಿ.ಪುಟ್ಟಸ್ವಾಮಿ, ರಾಜು,
ಭವಾನಿ ದೇವಿ, ಸಿ.ಎಂ.ಸುಶೀಲಾ, ಶ್ವೇತ, ಬಿ.ಎಸ್.ಲತಾ, ಇತರರು ಹಾಜರಿದ್ದರು.