ಚಾಮರಾಜನಗರ: ನಗರದ ಭ್ರಮರಾಂಬ ಬಡಾವಣೆಯ 4ನೇ ಕ್ರಾಸ್ ನಲ್ಲಿರುವ ಶ್ರೀಮಹಾಗಣಪತಿ ದೇವಸ್ಥಾನ ವಾರ್ಷಿಕೋತ್ಸವವು ಜೂ. 21 ರಂದು ನಡೆಯಲಿದೆ.
ಸ್ವಸ್ತಿಶ್ರೀ ಶಾಲಿವಾಹನ ಶಕೆ ವರ್ಷಗಳು 1948ನೇ ಶ್ರೀ ಪರಾಭವ ನಾಮ ಸಂವತ್ಸರ ನಿಜಜೇಷ್ಠ ಮಾಸದ ಶುಕ್ಲಪಕ್ಷದ ಸಪ್ತಮಿ ತಿಥಿ ಭಾನುವಾರದಂದು
ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಪ್ರಾತಃಕಾಲ ಮೂಲ ದೇವರ ಅಭಿಷೇಕ, ಗಣಪತಿಪೂಜೆ, ಪುಣ್ಯಾಹ, ಕಳಶ ಸ್ಥಾಪನೆ, ನವಗ್ರಹ ಹೋಮ, ಗಣಪತಿ ಹೋಮ, ಪರಿವಾರ ದೇವತೆಗಳ ಹೋಮ ಹಾಗೂ ಆಂಜನೇಯಸ್ವಾಮಿ ಹೋಮ, ನಂತರ ಶ್ರೀ ಅಂಜನೇಯಸ್ವಾಮಿಯವರಿಗೆ ನೂತನ ಕವಚಧಾರಣೆ ಹಾಗೂ ಮಧ್ಯಾಹ್ನ 12-30 ಗಂಟೆಗೆ ಮಹಾಪೂರ್ಣಾಹುತಿ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೇರವೇರಲಿದ್ದು ಸಮಸ್ತ ಭಕ್ತ ಮಹಾಶಯರು ಸಕಾಲಕ್ಕೆ ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕು
ಅಂದು ಸಂಜೆ 4:30 ಗಂಟೆಗೆ ಶ್ರೀ ಮಹಾಗಣಪತಿ ದೇವರನ್ನು ಮುತ್ತಿನ ಪಲ್ಲಕ್ಕಿ ಉತ್ಸವವು ಪ್ರಮುಖ ಬೀದಿಗಳಲ್ಲಿ ಜರುಗಲಿದ್ದು ರಾತ್ರಿ 8-30 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಸಕಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು,ಮನ, ಧನ ಅರ್ಪಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀಮಹಾಗಣಪತಿ ಸೇವಾ ಸಮಿತಿ ಕೋರಿದೆ.