ಎ.ಎನ್.ಪಿ.ಆರ್. ಕ್ಯಾಮೆರಾಗಳ ಅಳವಡಿಕೆ : ಸಂಚಾರಿ ನಿಯಮ ಉಲ್ಲಂಘನೆಗಳ ಮೇಲೆ ನಿಗಾ

   ಚಾಮರಾಜನಗರ, ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ):- ಸಾರ್ವಜನಿಕ ಸುರಕ್ಷತೆ ಹಾಗೂ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಎ.ಎನ್.ಪಿ.ಆರ್. (ಂuಣomಚಿಣiಛಿ ಓumbeಡಿ Pಟಚಿಣe ಖeಛಿogಟಿiಣioಟಿ) ಕ್ಯಾಮೆರಾಗಳನ್ನು ಪ್ರಮುಖ ಹೆದ್ದಾರಿಗಳಲ್ಲಿ ಅಳವಡಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. 

   ಎ.ಎನ್.ಪಿ.ಆರ್. ಕ್ಯಾಮೆರಾಗಳ ಮೂಲಕ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಸ್ವಯಂ ಚಾಲಿತವಾಗಿ ಗುರುತಿಸಿ ಸಂಚಾರಿ ಉಲ್ಲಂಘನೆಗಳನ್ನು ಪರಿಣಾಮಕಾರಿಯಾಗಿ ಪತ್ತೆಹಚ್ಚಲು ಹಾಗು ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಇದು ಸಹಕಾರಿಯಾಗಿರುತ್ತದೆ. ವಿಶೇಷವಾಗಿ ಹೆಲ್ಮೇಟ್, ಸೀಟ್ ಬೆಲ್ಟ್ ಧರಿಸದೇ ಇರುವುದು, ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಜನರು ಸವಾರಿ ಮಾಡುವುದು, ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ ಮಾಡಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಚಾಲಕರುಗಳನ್ನು ವಿಶೇಷವಾಗಿ ಗುರುತಿಸಿ ಸದರಿ ವಾಹನಗಳ ಮಾಲೀಕರ ವಿಳಾಸಕ್ಕೆ ದಂಡ ವಿಧಿಸಿದ ಪೊಲೀಸ್ ನೋಟೀಸ್‌ಗಳನ್ನು ಅಂಚೆ ಮೂಲಕ ಕಳುಹಿಸಲಾಗುವುದು ಹಾಗೂ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ದಂಡ ವಿಧಿಸಿರುವ ಬಗ್ಗೆ ಎಸ್.ಎಂ.ಎಸ್. ಮೂಲಕ ಮಾಹಿತಿ ನೀಡಲಾಗುವುದು.

  ಎ.ಎನ್.ಪಿ.ಆರ್. ಕ್ಯಾಮೆರಾ ವ್ಯವಸ್ಥೆಯು ವಾಹನಗಳ ಸಂಚಾರವನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವುದರ ಜೊತೆಗೆ ಕಳುವಾದ ವಾಹನಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಸಂಬAಧಿಸಿದ ವಾಹನಗಳನ್ನು ಪತ್ತೆಹಚ್ಚಲು ಸಹ ನೆರವಾಗುತ್ತದೆ.

   ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸಿ, ವೇಗದ ಮಿತಿಯನ್ನು ಪಾಲಿಸಿ, ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದೇ ಸುರಕ್ಷಿತವಾಗಿ ಸಂಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ. ಮುತ್ತುರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *