ಚಾಮರಾಜನಗರ: 2026ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಪಾಲನಾ ಕೇಂದ್ರಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸುವಂತೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಒಕ್ಕೂಟದ ಪ್ರಮುಖ ಪ್ರಮುಖರಾದ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು.
2026ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಪಾಲನಾ ಕೇಂದ್ರಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿಗಾಗಿ ಕರೆದಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಹನೂರು ಎಲ್ಲಾ ತಾಲ್ಲೂಕುಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಸರ್ಕಾರವು ಅನುಮತಿ ನೀಡಿದ್ದು, ಸದರಿ ಶಿಶು ಪಾಲನಾ ಕೇಂದ್ರಗಳಲ್ಲಿ 6 ತಿಂಗಳಿಂದ 3 ವರ್ಷದ ಮಕ್ಕಳ ಪಾಲನೆ ಪೋಷಣೆ ಮಾಡಲು, ಸದರಿ ಕೇಂದ್ರಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಆಯ್ಕೆ ಮಾಡಲು ಚಾಮರಾಜನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಕರೆದಿದ್ದು, ಸದರಿ ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕು ಹಾಗೂ ಸಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಡಳಿತ ಭವನದ ಎಲ್ಲಾ ಇಲಾಖೆಗಳಲಿ ಹೊರಗುತ್ತಿಗೆ ಹಾಗೂ ಒಳಗುತ್ತಿಗೆ ಆಧಾರದ ಮೇಲೆ ನೌಕರರನ್ನು ನಿಯೋಜನೆ ನಡೆಯುತ್ತದೆ. ಎಲ್ಲಾ ಇಲಾಖೆಗಳಲ್ಲೂ ಒಳಮೀಸಲಾತಿ ಅನ್ವಯ. ಯಾವುದೇ ನೌಕರಿಯನ್ನು ತುಂಬುವಾಗ ಒಳಮೀಸಲಾತಿ ಪ್ರಕಾರ ನಮ್ಮ ಮಾದಿಗ ಜನಾಂಗಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪ್ರಮುಖರಾದ ಬಸವನಪುರ ರಾಜಶೇಖರ,
ಬ್ಯಾಂಕ್ ಬಸವರಾಜು, ಕೊಳ್ಳೇಗಾಲ ತಾಲ್ಲೂಕು ಬಾಬುಜಗಜೀವನರಾಂ ಸಂಘದ ಅಧ್ಯಕ್ಷ ಗೋಪಾಲ್, ಬೈರನತ್ತ ಮಹೇಶ್, ಹನೂರು ಗುರುಸ್ವಾಮಿ, ಬದನಗುಪ್ಪೆ ಮರಿಸ್ವಾಮಿ, ರಾಜೇಶ್, ಎಲ್ಲೆಮಾಳ ಜಡೆಯಪ್ಪ, ಸತೀಶ್, ರಾಜು, ಮುರುಗೇಶ್, ಶರವಣ, ಮಹದೇವು ಇತರರು ಹಾಜರಿದ್ದರು.
