
ಚಾಮರಾಜನಗರ: ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳು ಹಾಗೂ ಕುಂದು ಕೊರತೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪೌರಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಮಲೆ ಮಹದೇಶ್ವರ ಬೆಟ್ಟದ ಪೌರಕಾರ್ಮಿಕರ ಕುಂದುಕೊರತೆಗಳನ್ನು ಶೀಘ್ರದಲ್ಲೇ ಬಗೆಹರಿಸುವ ಭರವಸೆ ನೀಡಿದರು.
ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣಾ ಸಮಿತಿ ಸದಸ್ಯರಾದ ಸಿ.ಶಂಕರ್ ಅಂಕನಶೆಟ್ಟಿಪುರ, ಶ್ರೀ ಮಲೆ ಮಹದೇಶ್ವರ ಬೆಟ್ಟದ ಪೌರಕಾರ್ಮಿಕ ಸಂಘದ ಅಧ್ಯಕ್ಷ ಎಂ.ಪಿ.ಗೋಪಾಲ್, ಕಾರ್ಯದರ್ಶಿ, ಊರಿನ ಯಜಮಾನರು ಹಾಗೂ ಪದಾಧಿಕಾರಿಗಳು ಇದ್ದರು.