ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಜನಾಂಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಜನಾಂಗದ ಕಾನೂನು ಪದವೀಧರರಿಗೆ 2026-27ನೇ ಸಾಲಿನ ತರಬೇತಿ ಭತ್ಯೆ ಮಂಜೂರಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಬಂಧನೆಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಮತೀಯ ಅಲ್ಪಸಂಖ್ಯಾತರ ಜನಾಂಗದವರಾಗಿರಬೇಕು. ಅಭ್ಯರ್ಥಿಯ ವಯೋಮಿತಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 30 ವ? ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು, ಇಲ್ಲವೇ ಕೂಡಲೇ ನೋಂದಾಯಿಸಬೇಕು. ತರಬೇತಿ ಅವಧಿ ನಾಲ್ಕು ವ?ಗಳಾಗಿದ್ದು, ತರಬೇತಿಯನ್ನು ಸರ್ಕಾರಿ ಅಭಿಯೋಜಕರು, ಸರ್ಕಾರಿ ವಕೀಲರು ಅಥವಾ ೨೦ ವ?ಕ್ಕೆ ಕಡಿಮೆ ಇಲ್ಲದಂತೆ ವಕೀಲ ವೃತ್ತಿ ನಡೆಸುತ್ತಿರುವ ವಕೀಲರ ಬಳಿ ಪಡೆಯಬೇಕಾಗಿರುತ್ತದೆ. ಅಭ್ಯರ್ಥಿಯ ಆದಾಯ ೩.೫೦ ಲಕ್ಷ ರೂ. ಮೀರಿರಬಾರದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್‌ನ ೧ನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಗೆ ಆಗಸ್ಟ್ ೨೮ ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related