ಚಾಮರಾಜನಗರ: ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡಲಾಗುವ 2024-25ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಮಹಿಳಾ ಅಭಿವೃಧ್ಧಿ, ಕಲೆ, ಶಿಕ್ಷಣ, ಸಾಹಿತ್ಯ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುವುದು. ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ.
ಮಹಿಳಾ ಅಭಿವೃಧ್ಧಿ ಕ್ಷೇತ್ರ ಹಾಗೂ ಇತರೆ ಕ್ಷೇತ್ರಗಳಾದ ಕ್ರೀಡಾ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲೂ ಸಂಸ್ಥೆ ಹಾಗೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಫೆಬ್ರವರಿ 21ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.