ಚಾಮರಾಜನಗರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿ 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್‍ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ವೈದ್ಯಕೀಯ (ಎಂಬಿಬಿಎಸ್) ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುμï, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್‍ಗಳ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ವೆಬ್‍ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಮೇ 30 ರೊಳಗೆ ಅರ್ಜಿ ಸಲ್ಲಿಸಬಹುದು. ನಂತರ ಅಗತ್ಯ ದಾಖಲಾತಿಗಳನ್ನು ನಗರದ ಜಿಲ್ಲಾಡಳಿತ ಭವನದ 1ನೇ ಮಹಡಿಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ಕೊಠಡಿ ಸಂ 109, 110) ಸಲ್ಲಿಸಬೇಕು. ತದನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂ.ಸಂ 08226-222332 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Like this:
Like Loading...
Related