- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ಚಾಮರಾಜನಗರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡಲಾಗುವ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ 20 ಸಾವಿರ ರೂ. ಸಹಾಯಧನ, ಉಳಿಕೆ ಸಾಲದ ಮೊತ್ತ 80 ಸಾವಿರ ರೂ. ಗಳಿಗೆ ಶೇ. 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬೇಕು ಹಾಗೂ ಘಟಕ ವೆಚ್ಚ 2 ಲಕ್ಷ ರೂ. ಗಳಿಗೆ 40 ಸಾವಿರ ರೂ. ಸಹಾಯಧನ, ಉಳಿಕೆ ಸಾಲದ ಮೊತ್ತ 1,60,000 ರೂ. ಗಳಿಗೆ ಶೇ. 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯೂಎಸ್ ಪ್ರಮಾಣ ಪತ್ರ) ಹೊಂದಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಸಾಲದ ಉದ್ದೇಶವನ್ನು 10 ಪದಗಳಿಗಿಂತ ಕಡಿಮೆ ಇಲ್ಲದಂತೆ, ಸ್ಪಷ್ಟವಾಗಿ ಆನ್ ಲೈನ್ ಅರ್ಜಿಯಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ (ಎನ್‍ಪಿಸಿಐ ರಡಿ) ಸೀಡ್ ಆಗಿರಬೇಕು.
ಮಂಡಳಿಯಿಂದ ನೀಡಲಾಗುವ ಆರ್ಥಿಕ ನೆರವಿನಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಹಾಗೂ ವಿಶೇಷಚೇತನರಿಗೆ ಶೇ. 5ರಷ್ಟು ಮೀಸಲಾತಿ ನೀಡಲಾಗುವುದು. ವೆಬ್ ಸೈಟ್ https://Ksbdb.karnataka.gov.inಟಿ ನಲ್ಲಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8762249230 ಸಂಪರ್ಕಿಸಬಹುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related