ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಾಮರಾಜನಗರ ನಗರಸಭೆಯಲ್ಲಿ 8 ಹುದ್ದೆಗಳು, ಕೊಳ್ಳೇಗಾಲ ನಗರಸಭೆಯಲ್ಲಿ 13 ಮತ್ತು ಯಳಂದೂರು ಪಟ್ಟಣ ಪಂಚಾಯಿತಿಯಲ್ಲಿ 3 ಹುದ್ದೆಗಳು ಸೇರಿದಂತೆ ಒಟ್ಟು 24 ಹುದ್ದೆಗಳು ಖಾಲಿ ಇವೆ.
ಪೌರಕಾರ್ಮಿಕರ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕಡ್ಡಾಯವಾಗಿ ಕನ್ನಡ ಭಾμÉ ಮಾತನಾಡಲು ಬಲ್ಲವರಾಗಿರಬೇಕು. ಅಭ್ಯರ್ಥಿಯು 18 ರಿಂದ 55 ವರ್ಷದೊಳಗಿರಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಹಾಲಿ ಪೌರಕಾರ್ಮಿಕರ ಹುದ್ದೆಯಲ್ಲಿ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಹೊರಗುತ್ತಿಗೆ ಅಥವಾ ಲೋಡರ್ಸ್, ಕ್ಲೀನರ್ಸ್ ಹುದ್ದೆಗಳಲ್ಲಿ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಕೆಲಸ ನಿರ್ವಹಿಸುತ್ತಿರುವ ಮತ್ತು ಸರ್ಕಾರ ನಿಗದಿಪಡಿಸಿರುವ ನಿಯಮಗಳ ಪ್ರಾರಂಭದ ದಿನಾಂಕದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆದ್ಯತೆ ನೀಡಲಾಗುವುದು.
ಅರ್ಜಿಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 9 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಚೇರಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related