ಚಾಮರಾಜನಗರ: ಜಿಲ್ಲಾಮಟ್ಟದ ಕನ್ನಡ ರಾಜೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಸಮಾಜಸೇವೆ, ಕನ್ನಡಪರ ನಾಡು ನುಡಿ, ಭಾಷೆ, ನೆಲ-ಜಲ, ಸಂಸ್ಕøತಿ, ಪರಿಸರ, ಆರೋಗ್ಯ, ಕಲೆಯಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅರ್ಹರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.
ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಅಕ್ಟೋಬರ್ 8 ರಂದು ಜಿಲ್ಲಾ ಮಟ್ಟದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ವಿವಿಧ ಸಂಘಸಂಸ್ಥೆಗಳು, ಮುಖಂಡರುಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂವಭಾವಿ ಸಭೆಯಲ್ಲಿ ಸಾಧಕರನ್ನು ಗುರುತಿಸಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸಮಾಜಸೇವೆ, ಕನ್ನಡಪರ ನಾಡು ನುಡಿ, ಭಾಷೆ, ನೆಲ-ಜಲ, ಸಂಸ್ಕøತಿ, ಪರಿಸರ, ಆರೋಗ್ಯ, ಕಲೆಯಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅರ್ಹರು ತಮ್ಮ ಸ್ವ ವಿವರವುಳ್ಳ (ಬಯೋಡೆಟಾ) ದೊಂದಿಗೆ ತಾವು ಮಾಡಿರುವ ಸೇವಾ ಸಂಬಂಧ ದಾಖಲಾತಿಗಳನ್ನು ಲಗತ್ತಿಸಿ ಜಿಲ್ಲಾಧಿಕಾರಿಗಳ ಕಚೇರಿ ಚಾಮರಾಜನಗರ ಜಿಲ್ಲೆ, ಚಾಮರಾಜನಗರ ಇಲ್ಲಿಗೆ ಅಕ್ಟೋಬರ್ 21 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Like this:
Like Loading...
Related