ಉದ್ಯಮಶೀಲತಾ ತರಬೇತಿ, ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕಾಗಿ ಪ.ಜಾ., ಪ.ಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿಗೆ ಎಸ್.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ನೀಡುವ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ 5, ಪರಿಶಿಷ್ಟ ಪಂಗಡಕ್ಕೆ ಸೇರಿದ 3 ಅಭ್ಯರ್ಥಿಗಳಿಗೆ ಗುರಿ ನಿಗದಿಪಡಿಸಲಾಗಿದೆ. ತರಬೇತಿಯನ್ನು ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

20 ರಿಂದ 45 ವಯಸ್ಸಿನ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಒಂದು ತಿಂಗಳ (4 ವಾರ) ಅವಧಿಯ ಉದ್ಯಮಶೀಲತೆ ತರಬೇತಿ ನೀಡಲಾಗುತ್ತದೆ. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 217 ರಲ್ಲಿನ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಜನವರಿ 31 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *