ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಚಾಮರಾಜನಗರ ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಇಚ್ಚಿಸುವ ಪರಿಶಿಷ್ಟ ವರ್ಗದ (ಎಸ್.ಟಿ) ಮಹಿಳೆಯರಿಗೆ ಉಚಿತವಾಗಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲಿದ್ದು ಅರ್ಜಿ ಆಹ್ವಾನಿಸಲಾಗಿದೆ. 

ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಪರಿಶಿಷ್ಟ ವರ್ಗದ (ಎಸ್.ಟಿ) ಮಹಿಳೆಯರಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪೆÇ್ರೀತ್ಸಾಹ, ಮಹಿಳಾ ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. 

ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ (ಸಿಡಾಕ್) ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಜುಲೈ 10 ರೊಳಗೆ ಸಲ್ಲಿಸಬೇಕು. ದೂ.ಸಂ. 6361483358, 7760145784 ಗೆ ಕರೆ ಮಾಡುವ ಮೂಲಕವು ತರಬೇತಿಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *