ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಅರ್ಜಿ ಆಹ್ವಾನ

  • ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಶ್ರೀಮತಿ ಯಶೋಧರಾ ದಾಸಪ್ಪ ಪ್ರಶಸ್ತಿಗೆ ಮಹಿಳೆಯರು ಮತ್ತು ಮಹಿಳಾ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು 2026-27ನೇ ಸಾಲಿನಲ್ಲಿ ಯಶೋಧರಾ ದಾಸಪ್ಪ ಪ್ರಶಸ್ತಿಗಾಗಿ ಮಹಿಳೆಯರು ಮತ್ತು ಮಹಿಳೆಯರಿಂದ ಸ್ಥಾಪಿತವಾದ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ನಿಜಲಿಂಗಪ್ಪನವರ ಸಚಿವ ಸಂಪುಟದಲ್ಲಿ ಹಿರಿಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಯಶೋಧರಾ ದಾಸಪ್ಪ ಅವರು ಕರ್ನಾಟಕ ರಾಜ್ಯದಲ್ಲಿ ಪಾನ ನಿಷೇಧ ವಿರೋಧಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಬದ್ಧತೆಯನ್ನು ತೋರಿದರು. ಅವರ ಈ ತಮ್ಮ ನಿಷ್ಠೆ ನಿಲುವು ಮತ್ತು ಸಮಾಜಮುಖಿ ಸೇವೆಯನ್ನು ಸ್ಮರಿಸಿ, ಮದ್ಯ ಮತ್ತು ಮಾದಕ ದ್ರವ್ಯ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಮಹಿಳೆಯರು ಹಾಗೂ ಮಹಿಳಾ ಸಂಘ-ಸಂಸ್ಥೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ. ‘ಯಶೋಧರಾ ದಾಸಪ್ಪ’ ಅವರ ಹೆಸರಿನಲ್ಲಿ ರೂ.1.00 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ನೀಡಲಾಗುವುದು.

ಕರ್ನಾಟಕದಲ್ಲಿ ವಾಸಿಸುತ್ತಿರುವ, ಮಹಿಳೆಯರು ಮತ್ತು ಮಹಿಳಾ ಸಂಘಟನೆಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ನವೆಂಬರ್ 25 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಅಧ್ಯಕ್ಷರು/ಕಾರ್ಯದರ್ಶಿ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6 ನೇ ಮಹಡಿ, ಡಾ: ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-1 ಇಲ್ಲಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು. ತಮ್ಮ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಸಾಧಿಸಿರುವ ಕುರಿತು ಫೋಟೋ, ಲೇಖನಗಳು ಮತ್ತಿತರ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿರುವ ಹಾಗೂ ಮೂಡಿಸುತ್ತಿರುವ ಮಹಿಳೆಯರು ಮತ್ತು ಸಂಘ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕೆಂದು ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *