ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ನೂತನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಮಣಿಕಂಠ ಮಡಹಳ್ಳಿ ಅವರ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷರಾಗಿ ನಾಗೇಂದ್ರ ನಾಯಕ ಅವರು ಕಾರ್ಯ ನಿರ್ವಹಿಸುತ್ತಿದ್ದರೂ ಕೂಡ ಬದಲಾವಣೆ ಮಾಡಿ ಮಣಿಕಂಠ ಮಡಹಳ್ಳಿ ಅವರನ್ನು ದಿಢೀರ್‌ರಾಗಿ ನೇಮಕ ಮಾಡಲಾಗಿತು. ನಂತರ ನಡೆದ ಕೆಲ ಬೆಳವಣಿಗೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ರದ್ದುಪಡಿಸಿದ್ದಾರೆ.
