ಕಲಾ ಪ್ರತಿಭೋತ್ಸವ ಆರಂಭ : ಪರಿಶ್ರಮದಿಂದ ಪ್ರತಿಭೆ-ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ

ಚಾಮರಾಜನಗರ: ಪ್ರತಿಭೆ ಎಂಬುದು ದೈವದತ್ತವಾಗಿ ಅಥವಾ ದೈವಿ ಸೃಷ್ಟಿಯಲ್ಲ. ಅತೀ ಹೆಚ್ಚಿನ ಪರಿಶ್ರಮದಿಂದ ಬರುವಂತದ್ದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ತಿಳಿಸಿದರು.

  ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

  ಪ್ರತಿಭೆ ಎಂಬುದು ದೈವದತ್ತವಾಗಿ ಅಥವಾ ದೈವಿ ಸೃಷ್ಟಿಯಲ್ಲ, ಅದು ಅಭ್ಯಾಸ ಪರಿಶ್ರಮದಿಂದ ಕರಗತವಾಗಿ ಬರುವಂತದ್ದಾಗಿದೆ. ಸುತ್ತಮುತ್ತಲ ಪರಿಸರದಲ್ಲಿ ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಹಾಗೂ ನೃತ್ಯಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ವಿದ್ಯಾರ್ಥಿಗಳು ಮಾರ್ಗದರ್ಶಕರಾಗಿ ಇಟ್ಟುಕೊಳ್ಳಬೇಕು. ಕಲಾವಿದರು ನಿರಂತರವಾದ ಪರಿಶ್ರಮದಿಂದ ಕ್ಷೇತ್ರದಲ್ಲ್ಲಿ ವಿಶೇಷ ಅಭ್ಯಾಸದ ಜೊತೆಗೆ ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿಕೊಂಡು ಪ್ರತಿಭಾವಂತರಾಗಿ ರೂಪುಗೊಂಡಿದ್ದಾರೆ ಎಂದರು.

  ವಿದ್ಯಾರ್ಥಿಗಳು ತಮ್ಮಲ್ಲಿ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ತೊಡಗಿಕೊಂಡು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದರೆ  ತಾವು ಇಷ್ಟಪಟ್ಟ ಕ್ಷೇತ್ರದಲ್ಲಿ ಸಾಧಕರಾಗಬಹುದು. ಸ್ಪರ್ಧೆಗಳಲ್ಲಿ ಸೋಲು ಗೆಲುವುಗಳು ಸಾಮಾನ್ಯವಾಗಿದ್ದು, ಸೋತವರು  ಕುಗ್ಗದೆ, ಗೆದ್ದವರು ಹಿಗ್ಗದೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ಮಾಡಿದರು. 

 ವಿದ್ಯಾರ್ಥಿಗಳು ಅವರಲ್ಲಿರುವ ಕಲೆಯನ್ನು ಪ್ರದರ್ಶಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಸಹಕಾರಿಯಾಗಿರುವ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಹೇಳಿದರು.

  ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಚ್.ಎನ್. ಪುಟ್ಟಗೌರಮ್ಮ ಅವರು ಮಾತನಾಡಿ ಕಲೆ ಎಂಬುದು ಮಾನವನನ್ನು ಸದಾ ಜೀವಂತಿಕೆಯಿಂದ ಹಾಗೂ ಚಟುವಟಿಕೆಯಾಗಿ ಇರುವಂತೆ ಮಾಡುತ್ತದೆ. ಮಾನವನು ಬೆಳೆದಂತೆ ಮಾನವೀಯ ಮೌಲ್ಯಗಳನ್ನು ರೂಪಿಸಿಕೊಂಡು ಒಬ್ಬ ಸುಸಂಸ್ಕøತ ವ್ಯಕ್ತಿಯಾಗಿ ರೂಪುಗೊಳ್ಳಲು ಕಲೆ, ಸಾಹಿತ್ಯ, ಸಂಗೀತ, ಕ್ರೀಡೆಗಳು ಪೂರಕವಾಗಿವೆ ಎಂದು ತಿಳಿಸಿದರು.

  ಕನ್ನಡನಾಡಿನ ಸಂಸ್ಕೃತಿಯನ್ನು ಬೆಳೆಸಲು ಅನೇಕ ಇಲಾಖೆಯ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

  ಚಾಮರಾಜನಗರ ಜಿಲ್ಲೆಯು ಜನಪದ ಕಲೆಗಳ ತವರೂರಾಗಿದ್ದು, ಜಿಲ್ಲೆಯಲ್ಲಿ ಅನೇಕ ಕಲಾ ಪ್ರಕಾರಗಳು ಜನ್ಮ ತಾಳಿ ಬೆಳೆದು ರಾಷ್ಟ್ರಾದ್ಯಂತ ವ್ಯಾಪಿಸಿದೆ. ಮಹದೇಶ್ವರ, ಮಂಟೇಸ್ವಾಮಿ ಕಾವ್ಯ ಸೇರಿದಂತೆ ಗೊರವನ ಕುಣಿತ, ಕಂಸಾಳೆ ನೃತ್ಯ, ವಿವಿಧ ಕಲಾಪ್ರಕಾರಗಳು ಇಲ್ಲಿವೆ. ಇಂದು ಜಾಗತೀಕರಣದ ಹೊಡತಕ್ಕೆ ಸಿಕ್ಕಿ ಕಲಾಪ್ರಕಾರಗಳು ನಶಿಸಿ ಹೋಗುತ್ತಿವೆ. ಇಂತಹ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಚ್.ಎನ್. ಪುಟ್ಟಗೌರಮ್ಮ ಅವರು ತಿಳಿಸಿದರು. 

  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಸ್. ರಾಜು, ಜಿಲ್ಲಾಡಳಿತ ಶಿರಸ್ತೆದಾರರಾದ  ರಂಗರಾಜು, ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ದೊಡ್ಡಗವಿ ಬಸಪ್ಪ, ಸುಗಮ ಸಂಗೀತ ಪರಿಷತ್ ಅಧ್ಯಕ್ಷರಾದ ಬಿ. ಬಸವರಾಜು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *